ಪಾರ್ಟಿ ನೆಪದಲ್ಲಿ ಕರೆಸಿ ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನ - Mahanayaka
5:01 AM Thursday 16 - October 2025

ಪಾರ್ಟಿ ನೆಪದಲ್ಲಿ ಕರೆಸಿ ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

bengalore news
07/02/2023

ಬೆಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ರೂಮ್‌ ಗೆ ಕರೆಸಿಕೊಂಡು ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು‌ ವಿವೇಕನಗರದ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ.


Provided by

ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದ ಯುವಕರು, ತಮ್ಮ ಇಬ್ಬರು ಸ್ನೇಹಿತೆಯರನ್ನ ಪಾರ್ಟಿ ನೆಪದಲ್ಲಿ ಕರೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ನಾಲ್ವರು ಜಲಂದರ್ ವಿಶ್ವವಿದ್ಯಾಲಯದಲ್ಲಿ ಒಟ್ಟಿಗೆ ವಿದ್ಯಾಭ್ಯಾಸ ಮುಗಿಸಿ, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಮುಕ ಯುವಕರು ಪಾರ್ಟಿ ಮಾಡುವ ನೆಪದಲ್ಲಿ ತಮ್ಮ ಇಬ್ಬರು ಸ್ನೇಹಿತೆಯರನ್ನ ರೂಮಿಗೆ ಕರೆದಿದ್ದಾರೆ. ಮಧ್ಯರಾತ್ರಿ 2 ಗಂಟೆವರೆಗೂ ಮದ್ಯ ಸೇವಿಸಿದ್ದಾರೆ. ಬಳಿಕ ಇಬ್ಬರು ಯುವತಿಯರ ಮೇಲೂ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ ಒಬ್ಬಳು ಬಾತ್‌ರೂಮ್ ಸೇರಿಕೊಂಡಿದ್ದಾಳೆ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದೆ ಎಂದು ಪೊಲೀಸರು  ತಿಳಿಸಿದ್ದಾರೆ.

ಈ ಸಂಬಂಧ ಯುವತಿಯರು ವಿವೇಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಇಬ್ಬರು ಯುವಕರನ್ನ ಪೊಲೀಸರು ಬಂಧಿಸಿದ್ದಾರೆ, ತನಿಖೆ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ