ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ ನಲ್ಲಿದೆ ಉದ್ಯೋಗಾವಕಾಶ: 336 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ - Mahanayaka
5:01 AM Saturday 18 - October 2025

ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ ನಲ್ಲಿದೆ ಉದ್ಯೋಗಾವಕಾಶ: 336 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

nfl recruitment
18/10/2024

NFL Recruitment 2024: ಭಾರತ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಷನಲ್ ಫರ್ಟಿಲೈಜರ್ ಲಿಮಿಟೆಡ್ ನಲ್ಲಿ ನಾನ್ ಎಕ್ಸಿಕ್ಯೂಟಿವ್ ವಿಭಾಗದಲ್ಲಿ ಖಾಲಿ ಇರುವ 336 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.


Provided by

ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನವೆಂಬರ್ 8, 2024 ಕೊನೆಯ ದಿನಾಂಕವಾಗಿರುತ್ತದೆ.

ಈ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?

ಖಾಲಿ ಇರುವ ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರೊಡಕ್ಷನ್, ಇನ್ಸ್ಟ್ರುಮೆಂಟೇಶನ್, ಎಲೆಕ್ಟ್ರಿಕಲ್, ಮೆಕಾನಿಕಲ್  ಅಥವಾ ಕೆಮಿಕಲ್ ವಿಭಾಗದಲ್ಲಿ ಡಿಪ್ಲೋಮಾ ಮುಗಿಸಿರಬೇಕು. ಪ್ರೊಡಕ್ಷನ್ ವಿಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಬಿಎಸ್ಸಿ ಪದವಿ ಮುಗಿಸಿರಬೇಕು. ಸ್ಟೋರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದಾದರೂ ಪದವಿ ಸಾಕು. ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವರು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ ಅರ್ಹತೆಗಳು: ನೇಮಕಾತಿ ಮಾಡಿಕೊಳ್ಳುತ್ತಿರುವ ಈ ಎಲ್ಲಾ ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಇರಬೇಕು ಹಾಗೂ ಗರಿಷ್ಠ ವಯಸ್ಸು 30 ವರ್ಷ. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಗೆ ಒಳಪಡುವುದಾದರೆ ನಿಮಗೆ ವಯೋಮಿತಿ ಸಡಲಿಕೆ ಇರಲಿದೆ.

ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು?

ಸಾಮಾನ್ಯ ವರ್ಗದ ಅಭ್ಯರ್ಥಿಗಳು ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 200 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಇವರನ್ನು ಹೊರತುಪಡಿಸಿ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಫರ್ಟಿಲೈಝರ್ ಲಿಮಿಟೆಡ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಅಧಿಕೃತ ಜಾಲತಾಣ: https://careers.nfl.co.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ