ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರೋ ಆರೋಪಿಗಳಿಗೆ ಎರಡನೇ ಬಾರಿ ನೋಟಿಸ್ ನೀಡಿದ ಎನ್‌ ಐಎ - Mahanayaka
12:53 AM Friday 19 - December 2025

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರೋ ಆರೋಪಿಗಳಿಗೆ ಎರಡನೇ ಬಾರಿ ನೋಟಿಸ್ ನೀಡಿದ ಎನ್‌ ಐಎ

nia
16/07/2023

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ ಐಎ) ಆಗಸ್ಟ್ 18ರೊಳಗೆ ಶರಣಾಗುವಂತೆ ಇದೀಗ ಎರಡನೇ ಬಾರಿ ನೋಟಿಸ್ ನೀಡಿದೆ.

ಎನ್‌ ಐಎ ಕೋರ್ಟ್ ಆದೇಶದಂತೆ ಎನ್‌ ಐಎ ಅಧಿಕಾರಿಗಳು ದ.ಕ.ಜಿಲ್ಲೆಯ ಪುತ್ತೂರು ಹಾಗೂ ಸುಳ್ಯ ವ್ಯಾಪ್ತಿಯಲ್ಲಿ ಎಚ್ಚರಿಕೆ ನೋಟಿಸ್ ಅಂಟಿಸಿದ್ದಾರೆ, ಅಲ್ಲದೆ ಧ್ವನಿ ವರ್ಧಕ ಮೂಲಕವೂ ಎಚ್ಚರಿಕೆ ನೀಡಿದ್ದಾರೆ.

ಜೂನ್‌ ನಲ್ಲಿ ಮೊದಲ ಬಾರಿಗೆ ಎನ್‌ ಐಎ ಅಧಿಕಾರಿಗಳು ಇದೇ ರೀತಿ ಎಚ್ಚರಿಕೆ ನೀಡಿದ್ದರು. ಜೂನ್ 30ರಂದು ಶರಣಾಗುವಂತೆ ಗಡುವು ವಿಧಿಸಿದ್ದರು. ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಎಚ್ಚರಿಕೆ ನೀಡಿರುವ ಎನ್‌ ಐಎ ತಂಡ, ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಿಸಿದೆ. ಈಗಾಗಲೇ ತಲೆಮರೆಸಿಕೊಂಡಿರುವ ಆರೋಪಿಗಳ ಮನೆಗೆ ಎನ್‌ ಐಎ ತಂಡ ಕೋರ್ಟ್ ಆದೇಶದ ಪ್ರತಿ ಅಂಟಿಸಿದ್ದು ಶೋಧ ನಡೆಸುತ್ತಿದೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ