ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ | ದ.ಕ.ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ - Mahanayaka
12:21 AM Thursday 21 - August 2025

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ | ದ.ಕ.ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ

cm bommai
06/08/2021


Provided by

ಬೆಂಗಳೂರು:  ಕೊರೊನಾ ಪಾಸಿಟಿವಿಟಿ ದರ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ದಕ್ಷಿಣ ಕನ್ನಡ ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕೊವಿಡ್ ನಿರ್ವಹಣೆ ಸಂಬಂಧ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ರಾಜ್ಯಾದ್ಯಂತ ಸದ್ಯ ಇರುವ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರಲಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಮಹಾರಾಷ್ಟ್ರ ಹಾಗೂ ಕೇರಳ ಗಡಿ ಜಿಲ್ಲೆಗಳಲ್ಲಿ  ಶನಿವಾರ ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇನ್ನಷ್ಟು ಸುದ್ದಿಗಳು…

 

ವಿದ್ಯಾರ್ಥಿನಿ ಜೊತೆಗೆ ರಾಸಲೀಲೆ ನಡೆಸುತ್ತಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದ ಪ್ರಾಧ್ಯಾಪಕ! | “ರೇಪ್ ಮಾಡ್ದ” ಎಂದಿದ್ದ ವಿದ್ಯಾರ್ಥಿನಿ ಯೂಟರ್ನ್!?

ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಅನಾಥನಾಗಿದ್ದ | ಬಿಜೆಪಿ ಸೇರ್ಪಡೆಗೆ ಎನ್.ಮಹೇಶ್ ಪ್ರತಿಕ್ರಿಯೆ

“ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರಕ್ಕೆ ಸಮ”

ಬಿಗ್ ನ್ಯೂಸ್:  ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

ಇತ್ತೀಚಿನ ಸುದ್ದಿ