ನೈಟ್ ಕರ್ಫ್ಯೂ ವಾಪಸ್ ಪಡೆದ ಸಿಎಂ ಯಡಿಯೂರಪ್ಪ - Mahanayaka

ನೈಟ್ ಕರ್ಫ್ಯೂ ವಾಪಸ್ ಪಡೆದ ಸಿಎಂ ಯಡಿಯೂರಪ್ಪ

24/12/2020

ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರ ಯಡಿಯೂರಪ್ಪ ನೈಟ್ ಕರ್ಫ್ಯೂ ವಾಪಸ್ ಪಡೆದಿದ್ದು, ಈ ಬಗ್ಗೆ ಪ್ರಕಟನೆ ಬಿಡುಗಡೆ ಮಾಡಿದ್ದಾರೆ.

ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೊವಿಡ್ ವೈರಾಣುವಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರ ಕರ್ಫ್ಯೂ ಜಾರಿಗೆ ತೀರ್ಮಾನಿಸಲಾಗಿತ್ತು. ಆದರೆ ಕರ್ಫ್ಯೂ ಜಾರಿ ಅಗತ್ಯವಿಲ್ಲ ಎಂಬ ಸಾರ್ವಜನಿಕ ಅಭಿಪ್ರಾಯದ ಹಿನ್ನೆಲೆಯಲ್ಲಿ ಕರ್ಫ್ಯೂ  ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.ಕೊರೊನಾ ವೈರಸ್ ರಾತ್ರಿ ಮಾತ್ರ ಹರಡುವುದೇ? | ಏನಿದು ನೈಟ್ ಕರ್ಫ್ಯೂ, ಇದರ ಪ್ರಯೋಜನ ಏನು?

ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರುವ ಸಂದರ್ಭದಲ್ಲಿಯೇ ಮಹಾನಾಯಕ ಅಂತರ್ಜಾಲ ಮಾಧ್ಯಮ ಇದನ್ನು ತೀವ್ರವಾಗಿ ವಿರೋಧಿಸಿ ವರದಿ ಮಾಡಿತ್ತು. ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ಹಾಸ್ಯಾಸ್ಪದ ಎಂದು ಹೇಳಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ವಿವಿಧ ರಾಜಕೀಯ ನಾಯಕರೂ ಹೇಳಿಕೆ ನೀಡಿದ್ದರು. ಸಾರ್ವಜನಿಕರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

 

ಇತ್ತೀಚಿನ ಸುದ್ದಿ