ಚನ್ನಪಟ್ಟಣ ಉಪ ಚುನಾವಣೆ: ಬಿಜೆಪಿ—ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ - Mahanayaka

ಚನ್ನಪಟ್ಟಣ ಉಪ ಚುನಾವಣೆ: ಬಿಜೆಪಿ—ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ

channapattana
24/10/2024

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ , ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದೆ. ಜೆಡಿಎಸ್–ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್ ಹೆಸರು ಘೋಷಣೆ ಮಾಡಲಾಯಿತು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

ಇನ್ನು ಜೆಡಿಎಸ್ ಮತ್ತು ಬಿಜೆಪಿ ನಾಯಕರ ಸಮನ್ವಯ ಸಭೆಗೂ ಮೊದಲೇ ಇತ್ತ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿಯೇ ಚನ್ನಪಟ್ಟಣದ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಜೆಡಿಎಸ್ ಸಭೆ ಬಳಿಕ ಮಾತನಾಡಿದ ದೇವೇಗೌಡ, ನಿಖಿಲ್ ಅಭ್ಯರ್ಥಿಯಾಗಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.


Provided by

ಮೊನ್ನೆ ನಡೆದ ಸಭೆಯಲ್ಲೇ ಸರ್ವಾನುಮತ ನಿರ್ಧಾರ ಕೈಗೊಳ್ಳಲಾಗಿತ್ತು. ಆದ್ರೆ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಬೇಕೆಂದು ನಿಖಿಲ್ ಹೇಳಿದ್ದರು. ಇಂದು ಮತ್ತೆ ಕಾರ್ಯಕರ್ತರು ಬಂದು ನಿಖಿಲ್ ಸ್ಪರ್ಧೆಗೆ ಆಗ್ರಹಿಸಿದರು. ಹೀಗಾಗಿ ನಿಖಿಲ್ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಚನ್ನಪಟ್ಟಣ ಅಭ್ಯರ್ಥಿಯಾಗಿ ನಾಳೆ ನಿಖಿಲ್ ನಾಮಪತ್ರ ಸಲ್ಲಿಸುತ್ತಾರೆ. ಇದರಲ್ಲಿ ನಾನು ಸಹ ಭಾಗಿಯಾಗುತ್ತೇನೆ ಎಂದು ಸ್ಪಷ್ಟಪಡಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ