7:13 PM Wednesday 15 - October 2025

ನಿಖಿಲ್ ರನ್ನು ಸುಮಲತಾ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ | ಸಿದ್ದರಾಮಯ್ಯ

siddaramaiha
12/07/2021

ಹುಬ್ಬಳ್ಳಿ:  ತಮ್ಮ ಪುತ್ರ ನಿಖಿಲ್​ ಕುಮಾರಸ್ವಾಮಿಯನ್ನ ಸುಮಲತಾ ಅಂಬರೀಷ್​ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.​ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸುಮಲತಾ-ಕುಮಾರಸ್ವಾಮಿ ವಾಗ್ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಸುಮಲತಾ ಆರೋಪ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,  ಸುಮಲತಾ ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆಯಾದರೂ ಸ್ಥಳಕ್ಕೆ ಹೋಗಿ ಪರಿಶೀಲಿಸಬೇಕಿತ್ತು ಎಂದಿದ್ದಾರೆ.

ಕೆಆರ್​ ಎಸ್ ಡ್ಯಾಂನ 20 ಕಿಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಆರೋಪಿಸಿದ್ದಾರೆ. ಜೆಡಿಎಸ್ ನಾಯಕರ ಗಣಿ ಕಂಪನಿಗಳಿವೆ ಎಂದು ಆರೋಪಿಸಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಕೂಡ ಭಾಗಿಯಾಗಿದೆ. ಹೀಗಾಗಿ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version