3:17 PM Wednesday 15 - October 2025

ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಲಾರಿ | ಕಾರಿನಲ್ಲಿದ್ದ ಇಬ್ಬರ ದುರಂತ ಸಾವು

tumkur news
08/09/2021

ತುಮಕೂರು: ನಿಂತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ಕಾಮತ್ ಹೊಟೇಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮಾಹಿತಿಗಳ ಪ್ರಕಾರ, ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಮೂತ್ರ ವಿಸರ್ಜನೆಗೆ ತೆರಳಿದ್ದು, ಈ ವೇಳೆ ಕಾರಿನೊಳಗೆ ಇಬ್ಬರು ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಕೂಡ ಸಾವನ್ನಪ್ಪಿದ್ದಾರೆ.

42 ವರ್ಷ ವಯಸ್ಸಿನ ಗೌಡರ ನಾಗಪ್ಪ ಹಾಗೂ 38 ವರ್ಷ ವಯಸ್ಸಿನ ರಜಾಕ್ ಸಾಬ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಬಾದಾಮಿ ತಾಲೂಕಿನ ಗುಳೇದಗುಡ್ಡ ಮೂಲದವರು ಎನ್ನಲಾಗಿದ್ದು, ಮದುವೆಗೆಂದು ಬೆಂಗಳೂರಿಗೆ ಬರುತ್ತಿದ್ದ ವೇಳೆ ತಡ ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸುದ್ದಿಗಳು…

12 ವರ್ಷದ ಬಾಲಕಿಯ ಮೇಲೆ ಮಲತಂದೆ, ನೆರೆ ಮನೆಯ ವ್ಯಕ್ತಿಯಿಂದ ಅತ್ಯಾಚಾರ!

ನಿಶ್ಚಿತಾರ್ಥವಾದ ಬೆನ್ನಲ್ಲೇ ಗಂಡಿಗೆ ಶಾಕ್ ನೀಡಿದ ಯುವತಿ | ಚಿನ್ನಾಭರಣದೊಂದಿಗೆ ಪರಾರಿ, ತಾಯಿಗೂ ಟೋಪಿ ಹಾಕಿದ ಮಗಳು!

ಪ್ರೀತಿಸಿ ವಿವಾಹವಾಗಿದ್ದವರನ್ನು ಜಾತಿಗಾಗಿ ಬೇರ್ಪಡಿಸಿದರು! | ಫೇಸ್ ಬುಕ್ ಲೈವ್ ಗೆ ಬಂದು ಯುವಕ ಆತ್ಮಹತ್ಯೆ

ಡ್ರಗ್ಸ್ ಕಂಟಕ: ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು? | ರೂಮ್ ಗೆ ಅನುಶ್ರೀ ಡ್ರಗ್ಸ್ ತರುತ್ತಿದ್ದಳು ಎಂದ ಕಿಶೋರ್ ಶೆಟ್ಟಿ?

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಗೆ ಜೈಲೇ ಗತಿ

ಮಹಿಳೆಯನ್ನು ಕೊಂದು ಅಡುಗೆ ಮನೆಯಲ್ಲಿಯೇ ಸುಟ್ಟ ಲಿವ್ ಇನ್ ಪಾಟ್ನರ್!

 

ಇತ್ತೀಚಿನ ಸುದ್ದಿ

Exit mobile version