ಕೇರಳದಲ್ಲಿ ಸಾವನ್ನಪ್ಪಿದ ಯುವಕನಿಗೆ ನಿಫಾಹ್ ವೈರಸ್ ಅಟ್ಯಾಕ್: ಪುಣೆ ಲ್ಯಾಬ್ ದೃಢ
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 23 ವರ್ಷದ ಮೃತ ಬೆಂಗಳೂರಿನ ವಿದ್ಯಾರ್ಥಿಗೆ ನಿಫಾಹ್ ವೈರಸ್ ಸೋಂಕು ತಗುಲಿತ್ತು ಎಂದು ಪುಣೆ ವೈರಾಲಜಿ ಇನ್ ಸ್ಟಿಟ್ಯೂಟ್ ದೃಢಪಡಿಸಿದೆ. ಬೆಂಗಳೂರಿನಲ್ಲಿ ವಿದ್ಯಾರ್ಥಿಯಾಗಿದ್ದ ವಂಡೂರಿನ ನಡುವತ್ ಬಳಿಯ ಚೆಂಬರಂ ನಿವಾಸಿ. ಇವರು ಪೆರಿಂಥಲ್ಮಣ್ಣದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತ ಯುವಕನೊಂದಿಗೆ ನೇರ ಸಂಪರ್ಕಕ್ಕೆ ಬಂದ 151 ಜನರ ಪಟ್ಟಿಯನ್ನು ಆರೋಗ್ಯ ಇಲಾಖೆ ಭಾನುವಾರ ಬಿಡುಗಡೆ ಮಾಡಿದೆ. ಈ ಸಂಪರ್ಕ ಪಟ್ಟಿಯಲ್ಲಿನ ಮೂವರಲ್ಲಿ ವೈರಸ್ ಲಕ್ಷಣಗಳು ಕಂಡುಬಂದಿವೆ ಎಂದು ಇಲಾಖೆ ತಿಳಿಸಿದೆ.
ಕಾಲಿಗೆ ಗಾಯ ಮಾಡಿಕೊಂಡಿದ್ದ ಮೃತ ಯುವಕ ಇತ್ತೀಚೆಗೆ ಬೆಂಗಳೂರಿನಿಂದ ಬಂದಿದ್ದ ಎಂದು ಮಲಪ್ಪುರಂ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಐಎಎನ್ಎಸ್ಗೆ ತಿಳಿಸಿದ್ದಾರೆ. ನಂತರ ಯುವಕನಿಗೆ ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆತ ನಡುವತ್ನ ಕ್ಲಿನಿಕ್ಗೆ ಮತ್ತು ಮಲಪ್ಪುರಂನ ವಂಡೂರ್ ನಲ್ಲಿರುವ ಮತ್ತೊಂದು ಕ್ಲಿನಿಕ್ಗೆ ಭೇಟಿ ನೀಡಿದ್ದ. ಯುವಕ ಭಾನುವಾರ ನಿಧನರಾದ ನಂತರ ಆತನ ರಕ್ತದ ಮಾದರಿಗಳನ್ನು ನಿಪಾಹ್ ವೈರಸ್ ಪರೀಕ್ಷೆಗಾಗಿ ಪುಣೆ ವೈರಾಲಜಿ ಲ್ಯಾಬ್ಗೆ ಕಳುಹಿಸಲಾಗಿತ್ತು.
ಜೀವ ಉಳಿಸುವ ಪ್ರಯತ್ನವಾಗಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಂಸ್ಥೆಯು ಆಸ್ಟ್ರೇಲಿಯಾದಿಂದ ಖರೀದಿಸಿದ ಮೊನೊಕ್ಲೋನಲ್ ಪ್ರತಿಕಾಯವನ್ನು ವೈದ್ಯರು ಆತನಿಗೆ ಇಂಜೆಕ್ಷನ್ ಮೂಲಕ ನೀಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth