ಮಗುವನ್ನು ಕುದಿಯುವ ನೀರಿನ ಪಾತ್ರೆಯಲ್ಲಿ ಮುಳುಗಿಸಿಕೊಂದ ಪಾಪಿ!

pune
25/04/2023

ಪುಣೆ: ಒಂದೂವರೆ ವರ್ಷದ ಮಗುವನ್ನು ಕುದಿಯುವ ನೀರಿನ ಪಾತ್ರೆಯಲ್ಲಿ ಮುಳುಗಿಸಿ ಕೊಂದ ಅಮಾನವೀಯ ಘಟನೆ ಪಿಂಪ್ರಿ ಚಿಂಚ್ ವಾಡ್ ನಲ್ಲಿ ನಡೆದಿದೆ.

ಆರೋಪಿಯು ಮಗುವಿನ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಲು ಹಾಗೂ ಮದುವೆ ಆಗಲು ಬಯಸಿದ್ದ. ಆದರೆ ಮಹಿಳೆ ಇದನ್ನು ವಿರೋಧಿಸಿದ್ದಳು.ಇದರಿಂದ ಕೋಪಗೊಂಡ ಆರೋಪಿಯು ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದು, ಮಗುವನ್ನು ಕುದಿಯುವ ನೀರಿನಲ್ಲಿ ಮುಳುಗಿಸಿ ಭೀಕರವಾಗಿ ಹತ್ಯೆ ನಡೆಸಿದ್ದಾನೆ.

ಮಗುವಿನ ತಾಯಿಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version