ನಿರೀಕ್ಷೆಯಂತೆ ಕೆಲಸ ಮಾಡಲು ಸಾಧ್ಯವಾಗಿಲ್ಲ | ವಾಸ್ತವ ಒಪ್ಪಿಕೊಂಡ ಸಿಎಂ ಯಡಿಯೂರಪ್ಪ - Mahanayaka
1:46 PM Thursday 12 - September 2024

ನಿರೀಕ್ಷೆಯಂತೆ ಕೆಲಸ ಮಾಡಲು ಸಾಧ್ಯವಾಗಿಲ್ಲ | ವಾಸ್ತವ ಒಪ್ಪಿಕೊಂಡ ಸಿಎಂ ಯಡಿಯೂರಪ್ಪ

09/01/2021

ಕೊಪ್ಪಳ:  ನಾನು ನಿರೀಕ್ಷೆಯಂತೆ ಯಾವುದೇ ಕೆಲಸ ಮಾಡಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿದೆ. ಕೊರೊನಾ ಅತಿವೃಷ್ಟಿ, ಬರಗಾಲಗಳ ಹೊಡೆತದಿಂದ ಯಾವ ಕೆಲಸಗಳನ್ನೂ ನಿರೀಕ್ಷೆಯಂತೆ ಮಾಡಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕೊಪ್ಪಳದ ಬಸಾಪುರದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ನಿರೀಕ್ಷೆಯಂತೆ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂಬ ವಾಸ್ತವ ತಿಳಿಸಿದ ಅವರು,  ಬಜೆಟ್ ನಲ್ಲಿಯೂ 40-50 ಸಾವಿರ ಕೋಟಿ ಖೋತಾ ಆಗಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಇನ್ನೂ ಇದೇ ಸಂದರ್ಭದಲ್ಲಿ ಸಂಪುಟ ವಿಸ್ತರಣೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಯಾವಾಗ ಹೇಳುತ್ತದೋ ಆವಾಗ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.


Provided by

ಇತ್ತೀಚಿನ ಸುದ್ದಿ