ನಿರ್ಮಲಾ ಸೀತಾರಾಮನ್ ಬಳಿ ದುಡ್ಡಲ್ಲ, ಜನ ಬೆಂಬಲವಿಲ್ಲ: ಡಿಎಂಕೆ ತಿರುಗೇಟು

ಚೆನ್ನೈ: ನನ್ನ ಬಳಿ ದುಡ್ಡಿಲ್ಲ ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಎಂಕೆ ನಾಯಕರು ತಿರುಗೇಟು ನೀಡಿದ್ದಾರೆ.
ನಿರ್ಮಲಾ ಸೀತಾರಾಮನ್ ಹೇಳಿಕೆಯನ್ನು ಆಕ್ಷೇಪಿಸಿರುವ ಡಿಎಂಕೆ ಪಕ್ಷ, ಚುನಾವಣೆ ಗೆಲ್ಲಲು ಬೇಕಿರುವುದು ಹಣವಲ್ಲ, ಜನಬೆಂಬಲ. ನಿರ್ಮಲಾ ಸೀತಾರಾಮನ್ ಗೆ ಜನಬೆಂಬಲವಿಲ್ಲ ಹಾಗಾಗಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಡಿಎಂಕೆ ಮುಖಂಡ ಶರವಣ ಅಣ್ಣಾದೊರೈ ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರ ಚುನಾವಣೆಗೆ ಸ್ಪರ್ಧಿಸಲು ಹಣವಿಲ್ಲ ಎಂಬ ಹೇಳಿಕೆ ದೇಶಾದ್ಯಂತ ಚರ್ಚೆಗೀಡಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗಳಾಗಿವೆ.
ತಮಿಳುನಾಡಿನಲ್ಲಿ ಡಿಎಂಕೆ ಹಾಗೂ ಬಿಜೆಪಿ ನಾಯಕರ ನಡುವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ ಪರಸ್ಪರ ವಾಕ್ಸಮರಕ್ಕೆ ಕಾರಣವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth