ಕಾರುಗಳಲ್ಲಿ ಆರು ಏರ್‌ಬ್ಯಾಗ್ ಕಡ್ಡಾಯ ಅಲ್ವಂತೆ: ವಾಹನ ಪ್ರಯಾಣಿಕರಿಗೆ ರಿಲೀಫ್ ಕೊಟ್ರು ಕೇಂದ್ರ ಸಚಿವ ನಿತಿನ್ ಗಡ್ಕರಿ - Mahanayaka

ಕಾರುಗಳಲ್ಲಿ ಆರು ಏರ್‌ಬ್ಯಾಗ್ ಕಡ್ಡಾಯ ಅಲ್ವಂತೆ: ವಾಹನ ಪ್ರಯಾಣಿಕರಿಗೆ ರಿಲೀಫ್ ಕೊಟ್ರು ಕೇಂದ್ರ ಸಚಿವ ನಿತಿನ್ ಗಡ್ಕರಿ

14/09/2023


Provided by

ಕಾರುಗಳಲ್ಲಿ ಏರ್ ಬ್ಯಾಗ್ ಕಡ್ಡಾಯನಾ..? ಈ ಒಂದು ಪ್ರಶ್ನೆಗೆ ಕೇಂದ್ರ ಸರ್ಕಾರ ಏನ್ ಹೇಳಿದೆ ಗೊತ್ತಾ..? ಹೌದು.
ಕಾರುಗಳಲ್ಲಿ ಆರು ಏರ್‌ಬ್ಯಾಗ್ ಹೊಂದಿರಬೇಕು ಎಂಬುವುದು ಕಡ್ಡಾಯವಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಪ್ರಯಾಣಿಕ ಕಾರುಗಳಿಗೆ ಆರು ಏರ್ ಬ್ಯಾಗ್ ಕಡ್ಡಾಯ ಎಂಬ ನಿಯಮ ಕುರಿತು ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ಈ ಆದೇಶ ಕಡ್ಡಾಯವಲ್ಲ ಎಂದು ಹೇಳಿದರು.
ಭಾರತ ಸರ್ಕಾರವು 2022 ರಲ್ಲಿ ಪ್ರಯಾಣಿಕ ಕಾರುಗಳು ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಿತ್ತು. ಈ ನಿಯಮ ಅಕ್ಟೋಬರ್ 2023 ರಿಂದ ಜಾರಿಗೆ ಬರಲಿದೆ ಎಂದು ಈ ಹಿಂದೆ ಗಡ್ಕರಿ ಹೇಳಿದ್ದರು. ಆದರೆ ಈಗ ಈ ನಿಯಮ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ ಶೇಕಡಾ 10 ರಷ್ಟು ಜಿಎಸ್‌ಟಿ ಹೇರುವ ಯಾವುದೇ ಪ್ರಸ್ತಾವನೆ ಇಲ್ಲ. ಈ ಬಗ್ಗೆ ಪ್ರಕಟವಾದ ವರದಿಯ ಕುರಿತು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಈ ಬಗ್ಗೆ ಎಕ್ಸ್ ನಲ್ಲೂ ಮಾಹಿತಿ ನೀಡಿರುವ ಸಚಿವ ನಿತಿನ್ ಗಡ್ಕರಿ, ಡೀಸೆಲ್ ವಾಹನಗಳ ಮಾರಾಟದ ಮೇಲೆ ಪರಿಣಾಮ ಬೀರುವ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಸಕ್ರಿಯ ಪರಿಗಣನೆಯಲ್ಲಿಲ್ಲ ಎಂಬುದನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ.

2070 ರ ವೇಳೆಗೆ ಕಾರ್ಬನ್ ನೆಟ್ ಶೂನ್ಯವನ್ನು ಸಾಧಿಸಲು ಮತ್ತು ಡೀಸೆಲ್‌ನಂತಹ ಅಪಾಯಕಾರಿ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡಲು ಮತ್ತು ಆಟೋಮೊಬೈಲ್ ಮಾರಾಟದಲ್ಲಿನ ತ್ವರಿತ ಬೆಳವಣಿಗೆಗೆ ಅನುಗುಣವಾಗಿ ಸ್ವಚ್ಛ ಮತ್ತು ಹಸಿರು ಪರ್ಯಾಯ ಇಂಧನಗಳನ್ನು ಸಕ್ರಿಯವಾಗಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ