5:43 PM Wednesday 10 - December 2025

“ಬಿಹಾರ ಚುನಾವಣೆ ಫಲಿತಾಂಶದ ಬಳಿಕ ನಿತೀಶ್ ಕುಮಾರ್ ಬಿಜೆಪಿಗೆ ಕೈಕೊಡುತ್ತಾರೆ”

28/10/2020

ಪಾಟ್ನಾ: ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿ ಕೂಟ ತೊರೆದು ಆರ್ ಜೆಡಿ ಜೊತೆಗೆ ಹೋಗುತ್ತಾರೆ ಎಂದು ಲೋಕಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.


ನಿತೀಶ್ ಕುಮಾರ್ ಅವರಿಗೆ ನೀಡುವ ಒಂದೊಂದು ಮತವೂ, ಬಿಹಾರದ ಆಡಳಿತವನ್ನು ಕುಗ್ಗಿಸುವುದಷ್ಟೇ ಅಲ್ಲ. ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟವನ್ನು ಶಕ್ತಿಯುತಗೊಳಿಸಿದಂತೆ ಎಂದು ಅವರು ಟ್ವೀಟ್ ಮಾಡಿದ್ದಾರೆ.


ಬಿಹಾರ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ನಿತೀಶ್ ಕುಮಾರ್ ಅವರು, ತಮ್ಮನ್ನು ಮುಖ್ಯಮಂತ್ರಿ ಮಾಡಿಸಿದ್ದ ಆರ್ ಜೆಡಿ ಪಕ್ಷದೊಂದಿಗೆ ಹೊರಟುಹೋಗುತ್ತಾರೆ ಎಂದು ಪಾಸ್ವಾನ್ ಹೇಳಿದ್ದಾರೆ.


ಇತ್ತೀಚಿನ ಸುದ್ದಿ

Exit mobile version