ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ನಿತೀಶ್ ಕುಮಾರ್ ನಡೆ ಹಾಸ್ಯಸ್ಪದ: ಪ್ರಶಾಂತ್ ಕಿಶೋರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೋದಿಯವರ ಪಾದ ಮುಟ್ಟಿ ನಮಸ್ಕರಿಸುವ ಮೂಲಕ ಬಿಹಾರಕ್ಕೆ ಅಪಮಾನ ಮಾಡಿದ್ದಾರೆ ಎಂದು ರಾಜಕೀಯ ತಂತ್ರಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಕಿಶೋರ್ ಭಾಗಲ್ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆರೋಪಿಸಿದ್ದಾರೆ.
ನಿತೀಶ್ ಅವರು ಅಧಿಕಾರದಲ್ಲಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಹಾಗೆ ಮಾಡಿದ್ದಾರೆ ಎಂದು ಕಿಶೋರ್ ಹೇಳಿದರು.
ಪ್ರಧಾನಿ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ನಡೆದ ಎನ್ ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳಿಗೆ ನಮಸ್ಕರಿಸಿದ್ದನ್ನು ಉಲ್ಲೇಖಿಸಿ ಕಿಶೋರ್ ಈ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ನಿತೀಶ್ ಕುಮಾರ್ ಅವರೊಂದಿಗೆ ಕೆಲಸ ಮಾಡಿದ ನಾನು ಈಗ ಏಕೆ ಟೀಕಿಸುತ್ತಿದ್ದೇನೆ ಎಂದು ಜನರು ನನ್ನನ್ನು ಕೇಳುತ್ತಾರೆ. ಆಗ ಅವರು ವಿಭಿನ್ನ ವ್ಯಕ್ತಿಯಾಗಿದ್ದರು. ಅವರ ಆತ್ಮಸಾಕ್ಷಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ ಎಂದು 2015 ರಲ್ಲಿ ಜೆಡಿಯು ಅಧ್ಯಕ್ಷರ ಚುನಾವಣಾ ಪ್ರಚಾರವನ್ನು ನಿರ್ವಹಿಸಿದ್ದ ಮತ್ತು ಎರಡು ವರ್ಷಗಳ ನಂತರ ಔಪಚಾರಿಕವಾಗಿ ಪಕ್ಷಕ್ಕೆ ಸೇರಿದ ಕಿಶೋರ್ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth