12:10 PM Saturday 18 - October 2025

ಹೆಣ್ಣು ಕಲಿತರೆ ಗರ್ಭಿಣಿ ಮಾಡಲು ಗಂಡನಿಗೆ ಅವಕಾಶವೇ ನೀಡಲ್ಲ: ಬಿಹಾರ ಸಿಎಂ ನಿತೀಶ್ ಕುಮಾರ್ ವಿವಾದಾತ್ಮಕ ಹೇಳಿಕೆ

07/11/2023

ಹೆಣ್ಣು ಕಲಿತರೆ ಆಕೆಯನ್ನು ಗರ್ಭಿಣಿ ಮಾಡಲು ಗಂಡನಿಗೆ ಅವಕಾಶವೇ ನೀಡಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮಹಿಳೆ ಅಕ್ಷರಸ್ಥಳಾಗಿದ್ದರೆ ಜನನ ನಿಯಂತ್ರಣ ಹೇಗೆ ಸಾಧ್ಯವಾಗುತ್ತದೆ ಎಂಬುದನ್ನು ವಿವರಿಸುವ ಭರದಲ್ಲಿ ಅವರು ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ.

ಬಿಹಾರ ವಿಧಾನಸಭೆ ಕಲಾಪದಲ್ಲಿ ಮಾತನಾಡುತ್ತಿದ್ದ ಸಿಎಂ ನಿತೀಶ್ ಕುಮಾರ್ ಅವರು ಮಹಿಳೆ ಸುಶಿಕ್ಷಿತಳಾಗಿದ್ದರೆ ಹೇಗೆ ಜನನ ನಿಯಂತ್ರಣ ಸಾಧ್ಯವಾಗುತ್ತದೆ ಎಂಬುದನ್ನು ವಿವರಿಸುತ್ತಾ, ಮಹಿಳೆ ಒಂದೊಮ್ಮೆ ಜ್ಞಾನವಂತಳು. ಸುಶಿಕ್ಷಿತಳಾಗಿದ್ದರೆ ಗಂಡನ ಜತೆ ಮಿಲನಗೊಂಡಾಗಲೂ ತುಂಬ ಎಚ್ಚರವಾಗಿರುತ್ತಾಳೆ ಮತ್ತು ತಾನು ಗರ್ಭಿಣಿಯಾಗುವುದನ್ನು ತಪ್ಪಿಸುತ್ತಾಳೆ ಎಂದಿದ್ದಾರೆ. ಅಷ್ಟೇ ಅಲ್ಲದೇ, ಈ ವೇಳೆ ಅವರ ಕೈ ಸನ್ನೆಗಳು ಮತ್ತು ಭಾಷೆಯು ಅಪಾರ್ಥಕ್ಕೆ ಎಡೆ ಮಾಡಿಕೊಟ್ಟಿದೆ.

ನಿತೀಶ್ ಕುಮಾರ್ ಹೇಳಿಕೆಯನ್ನೇ ಪ್ರತಿಪಕ್ಷಗಳು ಅಸ್ತ್ರವನ್ನಾಗಿಸಿಕೊಂಡಿದೆ. ಈ ಕುರಿತಾದ ನೀಡುವ ವಿವರಣೆ ವೇಳೆ ಅವರು ಬಳಸುವ ಕೈ ಸನ್ನೆಗಳು ಮತ್ತು ಭಾಷೆ ಕೀಳು ಮಟ್ಟದಿಂದ ಕೂಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಬಿಜೆಪಿ ಈ ವಿಡಿಯೋವನ್ನು ಎಕ್ಸ್ ನಲ್ಲಿ ಶೇರ್ ಮಾಡಿದೆ.
ಸಿಎಂ ನಿತೀಶ್ ಕುಮಾರ್ ಅವರ ಮಾತುಗಳು ವೈರಲ್ ಆಗುತ್ತಿದ್ದಂತೆ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿರುವ ಡಿಸಿಎಂ ತೇಜಸ್ವಿ ಯಾದವ್ ಅವರು, ಸಿಎಂ ಅವರ ಮಾತುಗಳು ಅಶ್ಲೀಲವಲ್ಲ. ಅವು ಲೈಂಗಿಕ ಶಿಕ್ಷಣದ್ದಾಗಿವೆ ಎಂದು ಹೇಳಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version