ಶಾಕಿಂಗ್ ನ್ಯೂಸ್: ಇಂದು ರಾತ್ರಿ ಭಾರತದ ಈ ಪ್ರದೇಶಗಳ ಮೇಲೆ ಅಪ್ಪಳಿಸಲಿದೆ ತೀವ್ರ ಸ್ವರೂಪದ ಚಂಡಮಾರುತ - Mahanayaka
11:41 PM Friday 11 - September 2026

ಶಾಕಿಂಗ್ ನ್ಯೂಸ್: ಇಂದು ರಾತ್ರಿ ಭಾರತದ ಈ ಪ್ರದೇಶಗಳ ಮೇಲೆ ಅಪ್ಪಳಿಸಲಿದೆ ತೀವ್ರ ಸ್ವರೂಪದ ಚಂಡಮಾರುತ

25/11/2020

ನವದೆಹಲಿ: ಇಂದು ರಾತ್ರಿ 8 ಗಂಟೆಗೆ ತಮಿಳುನಾಡಿನ ಕರಾವಳಿ ಮೇಲೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಆತಂಕ ಮೂಡಿಸಿದೆ.

ಮಂಗಳವಾರ ರಾತ್ರಿಯೇ ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಅದು ತಮಿಳುನಾಡು ಮತ್ತು ಪುದುಚೇರಿಯನ್ನು ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದು ಹೋಗಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.




120-130 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳಲ್ಲಿ ಭಾರೀ ಮಳೆಯ ಸಾಧ್ಯತೆಗಳಿವೆ. ಹೀಗಾಗಿ ಯಾರೂ ಕೂಡ ಮೀನುಗಾರಿಕೆಗೆ, ಮೋಟಾರ್ ಬೋಟ್ಸ್ ಸೇರಿ ಇನ್ನಿತರೆ ಚಟುವಟಿಕೆಗಳಿಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ 1200 ಸಿಬ್ಬಂದಿ ಸಜ್ಜಾಗಿದ್ದಾರೆ. ಇತರೆ 800 ಹೆಚ್ಚುವರಿ ಮಂದಿ ಸನ್ನದ್ಧ ಸ್ಥಿತಿಯಲ್ಲಿದ್ದಾರೆ. ಮತ್ತೊಂದೆಡೆ ಬುಧವಾರ ಆಂಧ್ರಪ್ರದೇಶದ ಮೇಲೆ ಗತಿ ಚಂಡಮಾರುತ ಕೂಡ ದಾಳಿ ನಡೆಸಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler