7:43 PM Wednesday 22 - October 2025

ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ: ಡಿ.ಕೆ.ಶಿವಕುಮಾರ್

dk shivakumar
02/06/2023

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದೆ. ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ.

ಮೇಕೆದಾಟು ಯೋಜನೆಯನ್ನು ತಮಿಳುನಾಡು ವಿರೋಧಿಸುವುದಾಗಿ ಹೇಳಿದ ನಂತರ ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಸರಣಿ ಟ್ವೀಟ್ ಮಾಡಿದ್ದಾರೆ.

ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಮೇಕೆದಾಟು ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ ಎಂದಿದ್ದಾರೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ ಎಂದು ತಿಳಿಸಿದ್ದಾರೆ.

ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version