7:18 AM Saturday 20 - December 2025

ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಭಾರತ, ಅಮೆರಿಕ ಜಂಟಿ ಹೋರಾಟ: ಪ್ರಧಾನಿ ಮೋದಿ

23/06/2023

ಅಮೆರಿಕ ಭೇಟಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಇದೇ ವೇಳೆ ಮಾತನಾಡಿದ ಉಭಯ ನಾಯಕರು,
ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಭಾರತ ಮತ್ತು ಅಮೆರಿಕ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸಲಿವೆ ಎಂದು ಹೇಳಿದರು.

ಅಮೆರಿಕ ಭೇಟಿ ವೇಳೆ ಅದ್ಧೂರಿ ಸ್ವಾಗತ ನೀಡಿದ್ದಕ್ಕೆ ಬೈಡನ್​​ಗೆ ಧನ್ಯವಾದ ಸಮರ್ಪಿಸಿದ ಮೋದಿ, ಅಮೆರಿಕ-ಭಾರತ ನಡುವೆ ವ್ಯಾಪಾರ ವಹಿವಾಟು ಉತ್ತಮವಾಗಿದೆ. ಎರಡೂ ದೇಶಗಳ ನಡುವೆ ಸಂಬಂಧ ಹೊಸ ಉದ್ಯಮ ಸೃಷ್ಟಿಗೆ ನಾಂದಿ ಹಾಡಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಹಳೇ ಸಂಬಂಧ ಮತ್ತಷ್ಟು ಸದೃಢವಾಗಿದೆ ಎಂದರು.

ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಒಗ್ಗಟ್ಟಿನ ಹೋರಾಟ ಮುಂದುವರಿದಿದೆ. ಭಾರತ, ಅಮೆರಿಕ ಮುಂದೆಯೂ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸಲಿವೆ. ಪ್ರಜಾತಂತ್ರದ ಮೂಲ ಉದ್ದೇಶ ಗಟ್ಟಿಗೊಳಿಸುವುದೇ ಈ ಭೇಟಿಯ ಉದ್ದೇಶವಾಗಿದೆ. ಬೆಂಗಳೂರು, ಅಹಮದಾಬಾದ್​ನಲ್ಲಿ ಅಮೆರಿಕದ ರಾಯಭಾರ ಕಚೇರಿ ಆರಂಭವಾಗಲಿದೆ ಎಂದು ಮೋದಿ ಹೇಳಿದರು.

ರಾಜತಾಂತ್ರಿಕ ಮಾರ್ಗದ ಮೂಲಕ ರಷ್ಯಾ ಹಾಗೂ ಉಕ್ರೇನ್​ ನಡುವಣ ಯುದ್ಧ ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದರು. ಭಾರತ ಹಾಗೂ ಅಮೆರಿಕ ನಡುವಣ ಬಾಂಧವ್ಯಕ್ಕೆ ಆಕಾಶವೂ ಸಾಟಿಯಲ್ಲ ಎಂದು ಮೋದಿ ಬಣ್ಣಿಸಿದರು. ವ್ಯಾಪಾರ ಮತ್ತು ಹೂಡಿಕೆಯಲ್ಲಿ ಅಮೆರಿಕ-ಭಾರತದ ಪಾಲುದಾರಿಕೆ ಈ ಎರಡೂ ದೇಶಗಳಿಗೆ ಮಾತ್ರವಲ್ಲದೆ ಜಾಗತಿಕ ಆರ್ಥಿಕತೆಗೂ ಬಹಳ ಮುಖ್ಯವಾಗಿದೆ ಎಂದು ಅವರು ಹೇಳಿದರು. ಇಂದು, ಅಮೆರಿಕವು ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸಮಸ್ಯೆಗಳನ್ನು ಕೊನೆಗೊಳಿಸಲು ಮತ್ತು ಹೊಸ ಆರಂಭವನ್ನು ಪ್ರಾರಂಭಿಸಲು ನಾವು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು.

ಇದೇ ವೇಳೆ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಮತ್ತು ಭಾರತದ ನಿಯೋಗದ ಇತರ ಸದಸ್ಯರು ಪ್ರಧಾನಿ ಮೋದಿ ಮತ್ತು ಬೈಡನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version