ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ:  ನಿತಿನ್‌ ಗಡ್ಕರಿ - Mahanayaka

ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ:  ನಿತಿನ್‌ ಗಡ್ಕರಿ

nitin gadkari
18/05/2024

ಮುಂಬೈ: ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು  ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.


Provided by

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ  ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ‍್ಯಾಲಿ ಉತ್ತರಿಸಿರುವ ಅವರು,  ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವನ್ನು ಯಾವ ಸರ್ಕಾರದಿಂದಲೂ ಬದಲಾಯಿಸಲು ಸಾಧ್ಯವಾಗದು, ಆದರೆ, ಅದರಲ್ಲಿನ ಸೆಕ್ಷನ್‌ ಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ತರಬಹುದಷ್ಟೆ ಎಂದಿದ್ದಾರೆ.

ಕಾಂಗ್ರೆಸ್ ಸಂವಿಧಾನವನ್ನು 80 ಬಾರಿ ತಿದ್ದುಪಡಿ ಮಾಡಿದೆ. ಅದರ ಹೊರತಾಗಿಯೂ, ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಕಾಂಗ್ರೆಸ್‌ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ