ಸ್ವತಂತ್ರ ಸ್ಪರ್ಧೆ ಇಲ್ಲ, ಬಿಜೆಪಿಗೆ ಸೇರ್ಪಡೆಗೊಳ್ಳುತ್ತೇನೆ: ಮಂಡ್ಯ ಸಂಸದೆ ಸುಮಲತಾ ಘೋಷಣೆ - Mahanayaka

ಸ್ವತಂತ್ರ ಸ್ಪರ್ಧೆ ಇಲ್ಲ, ಬಿಜೆಪಿಗೆ ಸೇರ್ಪಡೆಗೊಳ್ಳುತ್ತೇನೆ: ಮಂಡ್ಯ ಸಂಸದೆ ಸುಮಲತಾ ಘೋಷಣೆ

sumalatha
03/04/2024

ಮಂಡ್ಯ:  ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ಘೋಷಿಸಿದ್ದು, ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.

ಇಂದು ತಮ್ಮ ಬೆಂಬಲಿಗರ ಸಭೆಯಲ್ಲಿ ಭಾವುಕರಾಗಿ ಸುಮಲತಾ ಅಂಬರೀಶ್ ಮಾತನಾಡಿದರು. ತಮ್ಮ ಮಾತಿನುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರು.

ಇಂದು ದೇಶಕ್ಕೆ ಉತ್ತಮ ಪ್ರಧಾನಿ ಸಿಕ್ಕಿದ್ದಾರೆ. ದೇಶ ಸಂಕಷ್ಟದ ಕಾಲದಲ್ಲಿದ್ದಾಗ ಅವರು ಅಧಿಕಾರವನ್ನು ವಹಿಸಿಕೊಂಡರು. ಆರ್ಥಿಕತೆಯಲ್ಲಿ ದೇಶವನ್ನು ಉತ್ತಮ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. ಇಷ್ಟು ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ನರೇಂದ್ರ ಮೋದಿ ಅವರ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕಿ ಇಲ್ಲ ಎಂದು ಸುಮಲತಾ ಹೇಳಿದರು.


Provided by

ಅವರು ತಮ್ಮ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟಿದ್ದಾರೆ. ಅಂಥವರನ್ನು ನಾವು ಬೆಂಬಲಿಸಬೇಕು. ದೇಶಕ್ಕಾಗಿ ನಾವು ಮೋದಿ ಅವರನ್ನು ಆಯ್ಕೆ ಮಾಡಬೇಕು. ಅಲ್ಲದೆ, ನಾನು ಪಕ್ಷೇತರ ಸಂಸದೆಯಾಗಿದ್ದರೂ ಅವರು ನನಗೆ ಸಾಕಷ್ಟು ಗೌರವವನ್ನು ನೀಡಿದ್ದಾರೆ. ಮಂಡ್ಯದಲ್ಲಿ ಸ್ಪರ್ಧೆ ವಿಚಾರ ಬಂದಾಗ ನನ್ನನ್ನು ಕರೆಸಿಕೊಂಡು ಪಕ್ಷೇತರವಾಗಿ ಸ್ಪರ್ಧೆ ಮಾಡುವುದು ಬೇಡ ಎಂದು ಹೇಳಿದ್ದಾರೆ. ನನ್ನ ಕ್ಷೇತ್ರದ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಿಕೊಟ್ಟರು. ಒಬ್ಬ ಪ್ರಧಾನಿಯೇ ಹೀಗೆ ಗೌರವ ಕೊಡುವಾಗ ನನಗೆ ಇನ್ನೇನು ಬೇಕು? ಹೀಗಾಗಿ ಈ ತೀರ್ಮಾನವನ್ನು ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಇನ್ನೂ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ನಡುವಿನ ರಾಜಕೀಯ ಗುದ್ದಾಟ ಇನ್ನೂ ಮುಂದುವರಿದಂತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ