ಮಗಳಿಗೆ ಇನ್ಸುಲಿನ್‌ ತೆಗೆದುಕೊಳ್ಳಲೂ ಹಣವಿಲ್ಲ: ಫೇಸ್ ಬುಕ್ ಲೈವ್ ಬಂದು ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣು

up man
10/07/2025

ಲಖನೌ(Mahanayaka): ಸಾಲಬಾಧೆಯಿಂದ ಬಳಲುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಮಧುಮೇಹದಿಂದ ಬಳಲುತ್ತಿರುವ ತನ್ನ ಮಗಳಿಗೆ ಇನ್ಸುಲಿನ್ ಇಂಜೆಕ್ಷನ್ ಖರೀದಿಸಲೂ ಸಾಧ್ಯವಾಗುತ್ತಿಲ್ಲ ಎಂದು ಫೇಸ್ ಬುಕ್ ಲೈವ್ ನಲ್ಲಿ ಹೇಳಿಕೊಂಡ ಬಳಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ವ್ಯಕ್ತಿ ಯಾರು ಎನ್ನುವುದನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ, ಗುಂಡು ಹಾರಿಸಿಕೊಳ್ಳುವುದಕ್ಕೂ ಮೊದಲು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ್ದ ವ್ಯಕ್ತಿ, ಉದ್ಯಮಿ ಸೆಲೆಬ್ರಿಟಿಗಳು ಮತ್ತು ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿ, ತನ್ನ ಕುಟುಂಬಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಮಧುಮೇಹದಿಂದ ಬಳಲುತ್ತಿರುವ ತಮ್ಮ ಮಗಳಿಗೆ ಜೀವ ಉಳಿಸುವ ಇನ್ಸುಲಿನ್ ಖರೀದಿಸಲು  ಕೂಡ ಹಣವನ್ನು ಹೊಂದಿಸಲು ಸಹ ಸಾಧ್ಯವಿಲ್ಲದ ಸ್ಥಿತಿಯಲ್ಲಿ ತಾನಿರುವುದಾಗಿ ಅಸಹಾಯಕತೆ ತೋಡಿಕೊಂಡಿದ್ದಾರೆ.

ವ್ಯಕ್ತಿಯ  ಫೇಸ್‌ ಬುಕ್ ಲೈವ್ ನೋಡಿದ ಅವರ ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪುವ ಹೊತ್ತಿಗೆ ಅವರು ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ವ್ಯಕ್ತಿ ತೀವ್ರ ಆರ್ಥಿಕ ಒತ್ತಡದಲ್ಲಿದ್ದರು ಮತ್ತು ಕಳೆದ ಕೆಲವು ವರ್ಷಗಳಿಂದ ಹಲವಾರು ಕೋಟಿಗಳಷ್ಟು ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಅವರ ಬಳಿ ಗುಂಡು ಹಾರಿಸಿಕೊಳ್ಳಲು ಅವರು ಆಯುಧ ಹೇಗೆ ಪಡೆದುಕೊಂಡರು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version