ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ - Mahanayaka

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ

c.m siddarmaya
01/06/2024


Provided by

ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ನಾವು ಕಾನೂನು ಪಾಲಕರು:

ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ ಎಂದರು.

ನನ್ನನ್ನು, ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ