'ಲೋಕ'ದಲ್ಲಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ವಿಶ್ವಾಸಮತ ಗೆದ್ದ ಮೋದಿ - Mahanayaka
12:04 PM Saturday 23 - August 2025

‘ಲೋಕ’ದಲ್ಲಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ವಿಶ್ವಾಸಮತ ಗೆದ್ದ ಮೋದಿ

10/08/2023


Provided by

ಮಣಿಪುರ ಹಿಂಸಾಚಾರದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಗುರುವಾರ ಸೋಲಾಗಿದೆ.
ಜುಲೈ 26 ರಂದು ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅದನ್ನು ಅಂಗೀಕರಿಸಿ, ಚರ್ಚೆಗೆ ಅವಕಾಶ ನೀಡಿದ್ದರು.
ಇಂದು ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಮಣಿಪುರ, ಮಣಿಪುರ ಎಂದು ಘೋಷಣೆ ಕೂಗುತ್ತಾ ಕಲಾಪದಿಂದ ಹೊರನಡೆದರು.
ಪ್ರಧಾನಿ ಮೋದಿ ಅವರ ಸುದೀರ್ಘ ಭಾಷಣದ ನಂತರ, ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಲಾಯಿತು. ಬಳಿಕ ಧ್ವನಿಮತದ ಮೂಲಕ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಯಿತು. ಇದರೊಂದಿಗೆ ಪ್ರತಿಪಕ್ಷಗಳ ಮೈತ್ರಿಕೂಟ INDIAಗೆ ಸೋಲುಂಟಾಗಿದೆ.
ಭಾಷಣದ ಕೊನೆಯಲ್ಲಿ ಮಣಿಪುರ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಮಣಿಪುರ ಘಟನೆ ಬಗ್ಗೆ ಸದನದಲ್ಲಿ ಅಮಿತ್ ಶಾ ಅವರು ಮಾಹಿತಿ ನೀಡಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಕೇಂದ್ರ, ಮಣಿಪುರ ಸರ್ಕಾರದಿಂದ ಯತ್ನ ನಡೆಯುತ್ತಿದೆ. ಮಣಿಪುರ ರಾಜ್ಯದಲ್ಲಿ ಖಂಡಿತಾ ಶಾಂತಿ ನೆಲೆಸಲಿದೆ ಎಂದು ಹೇಳಿದರು.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ