ಬಾಯಿಂದ ಮಾತುಗಳೇ ಹೊರಡುತ್ತಿಲ್ಲ: ಕಂಬನಿ ಮಿಡಿದ ವಿರಾಟ್ ಕೊಹ್ಲಿ - Mahanayaka

ಬಾಯಿಂದ ಮಾತುಗಳೇ ಹೊರಡುತ್ತಿಲ್ಲ: ಕಂಬನಿ ಮಿಡಿದ ವಿರಾಟ್ ಕೊಹ್ಲಿ

virat kohli
05/06/2025


Provided by

ಮುಂಬೈ: ಬಾಯಿಂದ ಮಾತುಗಳೇ ಹೊರಡುತ್ತಿಲ್ಲ, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಸಾವು-ನೋವಿನಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ವಿರಾಟ್‌ ಕೊಹ್ಲಿ ಕಂಬನಿ ಮಿಡಿದಿದ್ದಾರೆ.

ಇನ್‌’ಸ್ಟಾದಲ್ಲಿ ಪೋಸ್ಟ್‌ ಹಾಕಿರುವ ಅವರು,  ಆರ್‌ ಸಿಬಿ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಅಭಿಮಾನಿಗಳ ಸಾವು–ನೋವಿಗೆ  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ಆರ್ ಸಿಬಿ ಶೋಕ ವ್ಯಕ್ತಪಡಿಸಿದೆ.

ಸಂತ್ರಸ್ತರ ಕುಟುಂಬಗಳಿಗೆ ಸಂತಾಪಗಳು. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ತಿದ್ದುಪಡಿ ಮಾಡಿದ್ದೇವೆ. ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ಆರ್‌ ಸಿಬಿ ಅಭಿಮಾನಿಗಳು ದಯವಿಟ್ಟು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ