ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಉಕ್ರೇನ್‌ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ - Mahanayaka

ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಉಕ್ರೇನ್‌ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ

zalaskin
18/03/2022

ನವದೆಹಲಿ: ನೊಬೆಲ್ ಶಾಂತಿ ಪ್ರಶಸ್ತಿಗೆ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಅವರನ್ನು 2022ರಲ್ಲಿ ನಾಮನಿರ್ದೇಶನಗೊಂಡಿದ್ದಾರೆ.

ಹಾಲಿ ಮತ್ತು ಮಾಜಿ ಯುರೋಪಿಯನ್ ರಾಜಕಾರಣಿಗಳು ನಾರ್ವೇಜಿಯನ್ ನೊಬೆಲ್ ಸಮಿತಿಯು ಶಿಫಾರಸ್ಸು ಮಾಡಿದ್ದು, ಇದರಿಂದ ನಾಮನಿರ್ದೇಶನ ಪ್ರಕ್ರಿಯೆಯನ್ನು ಮಾ. 31ರವರೆಗೆ ವಿಸ್ತರಿಸಿದೆ.

ಅಧ್ಯಕ್ಷ ಝೆಲೆನ್ಸ್ಕಿ ಮತ್ತು ಉಕ್ರೇನ್ ಜನರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನವನ್ನು ಅನುಮತಿಸಲು ಮಾ. 31, 2022ರ ವರೆಗೆ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆಯನ್ನು ವಿಸ್ತರಿಸಲಾಗುವುದು ಎಂದು ಸಮಿತಿ ಹೇಳಿದೆ.

ನೊಬೆಲ್ ಶಾಂತಿ ಪ್ರಶಸ್ತಿಗಾಗಿ 2022ರ ನಾಮನಿರ್ದೇಶನ ವಿಧಾನವನ್ನು ಪುನಃ ತೆರೆಯಲು ಮತ್ತು ಮರುಪರಿಶೀಲಿಸಲು ರಾಜಕಾರಣಿಗಳು ಸಮಿತಿಗೆ ಕರೆ ನೀಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ವರ್ಷದ ನೊಬೆಲ್ ಪ್ರಶಸ್ತಿ ಘೋಷಣೆಗಳು ಅ. 3-10 ರವರೆಗೆ ನಡೆಯಲಿದೆ. 2022ರ ನೊಬೆಲ್ ಶಾಂತಿ ಪ್ರಶಸ್ತಿಗಾಗಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳು ಅರ್ಜಿ ಸಲ್ಲಿಸಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ: ಆರೋಪಿಗಳ ಬಂಧನ

ಇಂದು, ಬಾಬಾ ಸಾಹೇಬ್ ಅಂಬೇಡ್ಕರರು ಕಣ್ಣೀರು ಹಾಕಿದ ದಿನ

ಬಟ್ಟೆ ಅಂಗಡಿ ಮಾಲಕಿಯನ್ನು 30ಕ್ಕೂ ಹೆಚ್ಚು ಬಾರಿ ಇರಿದು ಹತ್ಯೆ!

ಕಲ್ಲಂಗಡಿ ಹಣ್ಣು ಕತ್ತರಿಸಿ ಗೆಳತಿಯ ಹುಟ್ಟುಹಬ್ಬ ಆಚರಣೆ: ವಿದ್ಯಾರ್ಥಿಗೆ ಶಿಕ್ಷಕರಿಂದ ಥಳಿತ

ಮಗಳಿಗೆ ಅಪ್ಪ ಬೇಡ ಎಂದರೆ ಆಸ್ತಿ ಹಕ್ಕು ಇರುವುದಿಲ್ಲ: ಸುಪ್ರೀಂಕೋರ್ಟ್

 

ಇತ್ತೀಚಿನ ಸುದ್ದಿ