ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೊಟ್ ನೇಮಕ - Mahanayaka

ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೊಟ್ ನೇಮಕ

thawar chand gehlot
06/07/2021


Provided by

ಬೆಂಗಳೂರು:  ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೊಟ್ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ  ಕೇಂದ್ರವು  ಈ ನೇಮಕ ಮಾಡಿದೆ.

 ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ ಎಂದು ಹೇಳಲಾಗಿದ್ದು, ಕರ್ನಾಟಕಕ್ಕೆ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.

 ಕೇಂದ್ರ ಸಂಪುಟ ಪುನಾರಚನೆಗೆ ನಿರ್ಧಾರ ಮಾಡಿರುವ ಪ್ರಧಾನಿ ಮೋದಿ ಹಿರಿಯ ಸಚಿವರಿಗೆ ಕೊಕ್ ನೀಡಿ ವಿವಿಧ ರಾಜ್ಯಗಳಿಗೆ ರಾಜ್ಯಪಾಲರನ್ನಾಗಿ ನೇಮಕ ಮಾಡುವ ಮೂಲಕ, ಸಂಪುಟದಲ್ಲಿ ಹೊಸ ಮುಖಗಳಿಗೆ ಸ್ಥಾನ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ