ತಂದೆ–ಮಗನಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡದೇ ಜಾತಿನಿಂದನೆ: ಅರ್ಚಕನ ವಿರುದ್ಧ ದೂರು
ತಂದೆ ಹಾಗೂ ಮಗನಿಗೆ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿ ಜಾತಿನಿಂದನೆಗೈದ ಘಟನೆ ಕಂಬದಕೋಣೆ ಗ್ರಾಮದ ಕೊಕ್ಕೇಶ್ವರ ದೇವಸ್ಥಾನದಲ್ಲಿ ನ.28ರಂದು ನಡೆದಿದೆ.
ಈ ಸಂಬಂಧ ಕಂಬದಕೋಣೆ ಗ್ರಾಮದ ಹಳಗೇರಿಯ 51ವರ್ಷದ ಶಿವರಾಮ ಎಂಬವರು ಅರ್ಚಕರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶಿವರಾಮ ಅವರು ನ.28ರಂದು ಬೆಳಗ್ಗೆ ದೇವರಿಗೆ ಪೂಜೆ ಮಾಡಿಸಲು ಹಣ್ಣುಕಾಯಿ, ಹೂವು ಹಾಗೂ ಪೂಜಾ ಸಾಮಗ್ರಿಗಳನ್ನು ತೆಗೆದುಕೊಂಡು ಮಗನೊಂದಿಗೆ ಕಂಬದಕೋಣೆ ಗ್ರಾಮದ ಕೊಕ್ಕೇಶ್ವರ ದೇವಸ್ಥಾನಕ್ಕೆ ಹೋಗಿದ್ದರು.
ಈ ವೇಳೆ ದೇವಸ್ಥಾನದ ಅರ್ಚಕ ಶೇಷಗಿರಿ ಕಾರಂತ್ ಎಂಬವರು ಗರ್ಭಗುಡಿ ಬಳಿ ಶಿವರಾಮ ಹಾಗೂ ಅವರ ಮಗನನ್ನು ತಡೆದು ನಿಲ್ಲಿಸಿದ್ದಾರೆ ಎನ್ನಲಾಗಿದೆ. ಆಗ ದೇವರಿಗೆ ಪೂಜೆ ಮಾಡಿಕೊಡುವಂತೆ ಶಿವರಾಮ ವಿನಂತಿಸಿಕೊಂಡಿದ್ದು, ಅದಕ್ಕೆ ಶೇಷಗಿರಿ ಕಾರಂತರು ಒಪ್ಪಲಿಲ್ಲ ಎಂದು ತಿಳಿದುಬಂದಿದೆ.
ಈ ಮೂಲಕ ಅರ್ಚಕರು ಶಿವರಾಮ ಹಾಗೂ ಅವರ ಮಗನಿಗೆ ಜಾತಿನಿಂದನೆ ಮಾಡಿ ದೇವಸ್ಥಾನಕ್ಕೆ ಪ್ರವೇಶ ಹಾಗೂ ಪೂಜೆಗೆ ನಿರಾಕರಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka