8:20 AM Saturday 25 - October 2025

ರಾಜ್ಯ ವಿಧಾನಸಭಾ ಚುನಾವಣೆ: ಮೇ 10 ರಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆ ಘೋಷಣೆಗೆ ಸೂಚನೆ

election
02/04/2023

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು  ಎಲ್ಲಾ ಪಕ್ಷಗಳ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ಅಭ್ಯರ್ಥಿಗಳ ಆಯ್ಕೆ ಪ್ರಚಾರದ ಭರಾಟೆಯಲ್ಲಿ ರಾಜಕೀಯ ಪಕ್ಷಗಳು ತೊಡಗಿವೆ.

ಈ ಮಧ್ಯೆ  ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ  ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ.

ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು, ದಿನಾಂಕ 29-03-2023ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಲಾಗಿದೆ. ದಿನಾಂಕ 10-05-2023ರಂದು ಮತದಾನ ನಿಗದಿ ಪಡಿಸಲಾಗಿದೆ . ರಾಜ್ಯ ವಿಧಾಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಎಲ್ಲಾ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ವಾಮ್ಯಕ್ಕೆ ಒಳಪಟ್ಟ ಸಂಸ್ಥೆಗಳಿಗೆ, ಸರ್ಕಾರಿ ಹಾಗೂ ಖಾಸಗಿ, ಅನುದಾನಿತ, ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ, ಔಧ್ಯಮಿಕ ಸಂಸ್ಥೆಗಳ ಹಾಗೂ ಇನ್ನಿತರ ಸಂಸ್ಥೆಗಳಿಗೆ ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಸೂಚಿಸಿದ್ದಾರೆ.

ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔಧ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಎಸ್ಟಾಬ್ಲಿಷ್ ಮೆಂಟ್ ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ರೆಪ್ರೆಸೆಂಟೇಷನ್ ಆಫ್ ಪೀಪಲ್ ಆಕ್ಟ್ 1951ರ ಕಲಂ 135ಬಿ ರಡಿಯಲ್ಲಿ ವೇತನ ಸಹಿತ ರಜೆ ನೀಡುಲು ಸೂಚಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಶೀಘ್ರವೇ ರಾಜ್ಯದ ಮುಖ್ಯ ಚುನಾವಣಾ ಆಯುಕ್ತರು ಆದೇಶ ಹೊರಡಿಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version