ಯಮುನಾ ನದಿ ಕಲುಷಿತ ಆರೋಪ: ಕೇಜ್ರಿವಾಲ್ ಗೆ ನೋಟೀಸ್

ಯಮುನಾ ನದಿ ನೀರನ್ನು ಉದ್ದೇಶಪೂರ್ವಕವಾಗಿ ವಿಷಪೂರಿತಗೊಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ರಿಗೆ ಶುಕ್ರವಾರ ಬೆಳಿಗ್ಗೆ 11 ಗಂಟೆಯೊಳಗೆ ಸಾಕ್ಷ್ಯ ಒದಗಿಸುವಂತೆ ಚುನಾವಣಾ ಆಯೋಗ ಹೇಳಿದೆ. ಒಂದು ವೇಳೆ ವಿಫಲವಾದರೆ ಈ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಆಯೋಗವು ಮುಕ್ತವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದೆ.
ವಾಯ್ಸ್: ಚುನಾವಣಾ ಆಯೋಗದ ನೋಟೀಸ್ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅರವಿಂದ್ ಕೇಜ್ರಿವಾಲ್ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ರಾಜಕೀಯ ಮಾಡುತ್ತಿದ್ದಾರೆ. ನಿವೃತ್ತಿಯ ನಂತರದ ಕೆಲಸವನ್ನು ಬಯಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕುಮಾರ್ ಮತ್ತು ಅವರ ಸಹದ್ಯೋಗಿ ಚುನಾವಣಾ ಆಯುಕ್ತರಿಗೆ ಮೂರು ಬಾಟಲಿ ಯಮುನಾ ನೀರನ್ನು ಕಳುಹಿಸುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ ಮತ್ತು ಆ ನೀರು ಕುಡಿಯಲು ಸವಾಲು ಹಾಕಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj