ಯುಪಿಯ ವಕ್ಫ್ ಬೋರ್ಡ್ ಗೆ ಚುನಾವಣೆ ನಡೆಸದ್ದಕ್ಕೆ ಆಕ್ಷೇಪ: ವಕ್ಫ್ ಇಲಾಖೆಯ ಕಾರ್ಯದರ್ಶಿಗೆ ನೋಟಿಸ್

04/03/2025

ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ಗೆ ಚುನಾವಣೆ ನಡೆಸದೆ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್ ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಲ್ಪಸಂಖ್ಯಾತ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ, ಮೋನಿಕ ಗಾರ್ಗ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ನಿಮ್ಮ ವಿರುದ್ಧ ಯಾಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂದು ನೋಟಿಸಿನಲ್ಲಿ ಪ್ರಶ್ನಿಸಲಾಗಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಹಿನ್ನೆಲೆಯಲ್ಲಿ 2024 ಮಾರ್ಚ್ 11 ರಂದು ಈ ಚುನಾವಣೆ ನಡೆಸಲು ಆದೇಶಿಸಲಾಗಿತ್ತು. ಆದರೆ ನೀವೇಕೆ ಅದಕ್ಕೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ನ್ಯಾಯಾಂಗ ನಿಂದನೆಗಾಗಿ ನಿಮ್ಮನ್ನು ಯಾಕೆ ವಿಚಾರಣೆಗೆ ಒಳಪಡಿಸಬಾರದು ಎಂದು ನ್ಯಾಯಾಲಯ ತೀಕ್ಷ್ಣವಾಗಿ ಪ್ರಶ್ನಿಸಿದೆ.

2024ರಲ್ಲಿ ಮೊಹಮ್ಮದ್ ಇಸ್ ಹಾಕ್ ಎಂಬವರು ಈ ಕುರಿತಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ನಲ್ಲಿ ಎರಡು ಸ್ಥಾನಗಳು ಖಾಲಿಯಾಗಿವೆ. ಅದಕ್ಕೆ ಚುನಾವಣೆ ನಡೆಸಿಲ್ಲ. ಆದ್ದರಿಂದ ಅದರ ಕಾರ್ಯಕಲಾಪಗಳು ಪರಿಣಾಮಕಾರಿಯಾಗಿ ನಡೆಯುತ್ತಿಲ್ಲ ಎಂದವರು ದೂರಿನಲ್ಲಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಉತ್ತರಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. ಶೀಘ್ರವೇ ನಾವು ಚುನಾವಣೆ ನಡೆಸುತ್ತೇವೆ ಎಂದು ಸರ್ಕಾರ ಹೇಳಿತ್ತು. ಮುಂದಿನ ಎರಡು ತಿಂಗಳೊಳಗೆ ಚುನಾವಣೆಯನ್ನ ನಡೆಸಿ ಎಂದು 2024 ಮಾರ್ಚ್ 11ರಂದು ಉತ್ತರ ಪ್ರದೇಶ ಸರಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version