ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್! - Mahanayaka

ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್!

darshan
01/03/2024

ಬೆಂಗಳೂರು: ನಟ ದರ್ಶನ್ ಅವರು ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಬಗ್ಗೆ ಮಹಿಳಾ ಆಯೋಗಕ್ಕೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಶ್ರೀರಂಗಪಟ್ಟಣದಲ್ಲಿ ನಡೆದ ಕಾಟೇರ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ಹಾಗೂ ಡಿ ಪರ್ವ 25 ಕಾರ್ಯಕ್ರಮದಲ್ಲಿ ನಟ ದರ್ಶನ್ ಹೆಣ್ಣಿನ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಗೌಡತಿಯರ ಸಂಘದಿಂದ ದೂರು ನೀಡಲಾಗಿತ್ತು.

ಇದೀಗ ಈ ದೂರಿಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆರೋಗವು ಒಂದು ವಾರದೊಳಗೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ನಟ ದರ್ಶನ್ ಅವರು ನಿರ್ಮಾಪಕ ಉಮಾಪತಿ ಅವರ ವಿರುದ್ಧ ತಗಡು ಎಂಬ ಪದ ಪ್ರಯೋಗ ಮಾಡಿದ ಬಳಿಕ ನಡೆದ ವಿದ್ಯಮಾನಗಳಲ್ಲಿ ನಟ ದರ್ಶನ್ ವಿರುದ್ಧ ದೂರು ನೀಡಲಾಗಿತ್ತು. ಇದೀಗ ಈ ದೂರಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿಯಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ