8:26 PM Thursday 30 - October 2025

ಆರ್ ​​ಎಸ್ ​​ಎಸ್​ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್

rss
30/10/2025

ಬೀದರ್: ಆರ್ ​​ಎಸ್ ​​ಎಸ್​ ಪಥಸಂಚಲನದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಔರಾದ್​ ತಾಲೂಕಿನ ನಾಲ್ವರು ಶಿಕ್ಷಕರಿಗೆ ಸರ್ಕಾರಿ ನಿಯಮ ಉಲ್ಲಂಘನೆ ಹಿನ್ನೆಲೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಔರಾದ್ ಬಿಇಓ ಅವರಿಂದ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅ.7,  13ರಂದು ಔರಾದ್ ​ನಲ್ಲಿ ನಡೆದಿದ್ದ  ಆರ್​​ ಎಸ್ ​​ಎಸ್​​ ಪಥಸಂಚಲನದಲ್ಲಿ ಶಿಕ್ಷಕರಾದ ಮಹದೇವ​, ಶಾಲಿವಾನ್​, ಪ್ರಕಾಶ್ ಮತ್ತು ಸತೀಶ್ ಎಂಬವರು​​ ಭಾಗವಹಿಸಿದ್ದರು.

ಈ ಬಗ್ಗೆ ಅಕ್ಟೋಬರ 27 ರಂದು ದಲಿತ ಸೇನೆಯ ಮುಖಂಡರು ಬಿಇಒಗೆ ದೂರು ನೀಡಿದ್ದರು. ಜೊತೆಗೆ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ದೂರು ಸಲಿಸಿದ ಮರುದಿನ ಅಂದರೆ ಮಂಗಳವಾರ ನಾಲ್ಕು ಜನ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಸರಕಾರಿ ನೌಕರರು ಆಗಿರುವುದರಿಂದ ಯಾವುದೇ ಪ್ರಕಾರ ರಾಜಕೀಯ ಮತ್ತು ಧಾರ್ಮಿಕ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ. ತಾವುಗಳು ಆರ್ ​​ಎಸ್​​​ ಎಸ್​ ಪಥಸಂಚಲನದಲ್ಲಿ ಭಾಗವಹಿಸಿ ಸರಕಾರದ ಸೇವಾ ನಿಬಂಧನೆಗೆ ವಿರುದ್ದವಾಗಿ ಕರ್ತವ್ಯ ಮಾಡಿರುವಿರಿ. ಈ ಪ್ರಯುಕ್ತ ತಾವುಗಳು ಈ ನೋಟಿಸ್ ತಲುಪಿದ ಬಳಿಕ ಕಾರಣ ಕೇಳುವ ನೋಟಿಸ್‌ಗೆ ಲಿಖಿತ ಹೇಳಿಕೆಯನ್ನು ನೀಡಿ ಖುದ್ದಾಗಿ ಬಂದು ಈ ಕಛೇರಿಗೆ ಸಲ್ಲಿಸುವುದು. ಇಲ್ಲವಾದಲ್ಲಿ ಏಕಪಕ್ಷಿಯವಾಗಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ. ನಿಯಂಕ್ರಣ ಮತ್ತು ಮೇಲ್ಮನವಿ) ನಿಯಮಗಳು-1957ರನ್ವಯ ಮುಂದಿನ ಕ್ರಮ ತೆಗೆದುಕೊಳ್ಳಲಾಗುದೆಂದು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ ಅಂತ ನೋಟಿಸ್ ನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version