12:16 AM Thursday 11 - December 2025

ಭೀಮಾ ತೀರದ ಕುಖ್ಯಾತ ರೌಡಿ ಬಾಗಪ್ಪ ಹರಿಜನ್ ಬರ್ಬರ ಹತ್ಯೆ: ಆಟೋದಲ್ಲಿ ಬಂದು ಹತ್ಯೆ ಮಾಡಿದ ದುಷ್ಕರ್ಮಿಗಳು!

bagappa harijan
12/02/2025

ವಿಜಯಪುರ: ಭೀಮಾ ತೀರದ ಕುಖ್ಯಾತ ರೌಡಿ ಬಾಗಪ್ಪ ಹರಿಜನ್ ನ ಮೇಲೆ ದುಷ್ಕರ್ಮಿಗಳು ಭೀಕರ ದಾಳಿ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾರೆ.  ನಗರದ ರೇಡಿಯೋ ಕೇಂದ್ರದ ಬಳಿ ಮಂಗಳವಾರ ರಾತ್ರಿ ಸುಮಾರು 10 ಗಂಟೆಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ.

ಸ್ಥಳೀಯರ ಪ್ರಕಾರ ಗುಂಡಿನ ಸದ್ದು ಕೂಡ ಕೇಳಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಸದ್ಯ ಸ್ಥಳಕ್ಕೆ ಗಾಂಧಿ ಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗಪ್ಪ ನಗರದ ಮದೀನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ರಾತ್ರಿ 9:30ರ ಸುಮಾರಿಗೆ ಆಟೋದಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳು ಕೃತ್ಯ ನಡೆಸಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಊಟದ ಬಳಿಕ ಬಾಗಪ್ಪ ಮನೆಯ ಮುಂದೆ ವಾಕಿಂಗ್ ಮಾಡುತ್ತಿದ್ದ ವೇಳೆ ಏಕಾಏಕಿ ಮಾರಕಾಸ್ತ್ರ ಹಾಗೂ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಎಷ್ಟು ಜನ ದುಷ್ಕರ್ಮಿಗಳು ಬಂದಿದ್ದರು ಎನ್ನುವ ಬಗ್ಗೆ ನಿಖರ ಮಾಹಿತಿ ದೊರೆತಿಲ್ಲ, ಮನೆಯವರು ನೀಡಿದ ಮಾಹಿತಿ ಆಧರಿಸಿ ಹೇಳುತ್ತಿದ್ದೇನೆ. ಕರೆಂಟ್ ಕಟ್ ಮಾಡಿದ ಬಗ್ಗೆ ಮಾಹಿತಿ ಇಲ್ಲ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾಗಪ್ಪನ ವಿರುದ್ಧ 10 ಕೇಸ್ ಗಳಿವೆ, ಈ ಪೈಕಿ 6 ಮರ್ಡರ್ ಕೇಸ್ ಗಳಿವೆ.  1993ರಿಂದ ಈತನ ಕ್ರಿಮಿನಲ್ ಹಿಸ್ಟ್ರಿ ಶುರುವಾಗಿದೆ. ಬಾಗಪ್ಪ ಹರಿಜನ್ ಭೀಮಾ ತೀರದ ಹಂತಕ ಎಂದೇ ಕುಖ್ಯಾತಿ ಪಡೆದಿದ್ದ ಚಂದಪ್ಪ ಹರಿಜನ್ ಶಿಷ್ಯನಾಗಿದ್ದನು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

 

ಇತ್ತೀಚಿನ ಸುದ್ದಿ

Exit mobile version