ನಾಳೆ 66ನೇ ಕನ್ನಡ ರಾಜ್ಯೋತ್ಸವ: ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ - Mahanayaka

ನಾಳೆ 66ನೇ ಕನ್ನಡ ರಾಜ್ಯೋತ್ಸವ: ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ

kannada rajyothava
31/10/2021


Provided by

ಬೆಂಗಳೂರು: ನಾಳೆ 66ನೇ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ  ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೊವಿಡ್ ನಿಯಮಗಳನ್ನು ಪಾಲಿಸಿಕೊಂಡು ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ನಡೆಸಲಾಗಿದ್ದು, ಎಲ್ಲಾ ಶಾಲೆಗಳಲ್ಲಿಯೂ ಸರಳ ಕನ್ನಡ ರಾಜ್ಯೋತ್ಸವ ಆಚರಿಸಲು ಸೂಚನೆ ನೀಡಲಾಗಿದೆ.

ಕಂಠೀರವ ಸ್ಟೇಡಿಯಂನಲ್ಲಿ  ನಡೆಯಲಿರುವ ಮಾತ್ರವೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 400ರಿಂದ 500 ಶಿಕ್ಷಕರಿಗೆ ಮಾತ್ರವೇ ಭಾಗವಹಿಸಲು ಅವಕಾಶ ನೀಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾತಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಶಿಕ್ಷಣ ಸಚಿವ ನಾಗೇಶ್, ರಿಝ್ವಾನ್ ಹರ್ಷದ್ ಹಾಜರಿರಲಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು 11 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ.

ಕೊವಿಡ್ ಲಕ್ಷಣ ರಹಿತರಿಗೆ ಮಾತ್ರ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಲೇಬೇಕು. ಎಲ್ಲರೂ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ