ಪ್ರಿಯಕರನನ್ನು ನೋಡಲು ಪಾಕಿಸ್ತಾನಕ್ಕೆ ಹೋದ ರಾಜಸ್ಥಾನದ ಮಹಿಳೆ..! - Mahanayaka

ಪ್ರಿಯಕರನನ್ನು ನೋಡಲು ಪಾಕಿಸ್ತಾನಕ್ಕೆ ಹೋದ ರಾಜಸ್ಥಾನದ ಮಹಿಳೆ..!

rajasthan
24/07/2023


Provided by

ಮೊನ್ನೆ ಗ್ರೇಟರ್ ನೊಯ್ಡಾಗೆ ಪಾಕಿಸ್ತಾನದ ಮಹಿಳೆ ಸೀಮಾ ತನ್ನ ಪ್ರಿಯಕರನನ್ನು ನೋಡಲು ಬಂದು ಸುದ್ದಿಯಾಗಿದ್ದಳು. ಇದೀಗ ಭಾರತದ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ತೆರಳಿದ್ದಾರೆ.

ಹೌದು. ಉತ್ತರ ಪ್ರದೇಶದ ಕೈಲೋರ್ ಗ್ರಾಮದಲ್ಲಿ ಜನಿಸಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದ 34 ವರ್ಷದ ಅಂಜು ತನ್ನ 29 ವರ್ಷದ ಪಾಕಿಸ್ತಾನಿ ಸ್ನೇಹಿತ ನಸ್ರುಲ್ಲಾನನ್ನು ಭೇಟಿಯಾಗಲು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಅಪ್ಪರ್ ದಿರ್ ಜಿಲ್ಲೆಗೆ ತೆರಳಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಸ್ರುಲ್ಲಾ ಮತ್ತು ಅಂಜು ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸ್ನೇಹಿತರಾಗಿದ್ದರು ಎಂದು ಎಆರ್ ವೈನ್ಯೂಸ್ ವರದಿ ಮಾಡಿದೆ.

ಅಂಜು ಆರಂಭದಲ್ಲಿ ಪೊಲೀಸರ ವಶದಲ್ಲಿದ್ದರು. ಆದರೆ ಅವರ ಪ್ರಯಾಣ ದಾಖಲೆಗಳನ್ನು ಜಿಲ್ಲಾ ಪೊಲೀಸರು ಪರಿಶೀಲಿಸಿದ ನಂತರ ಬಿಡುಗಡೆ ಮಾಡಿದ್ದಾರೆ. ಎಲ್ಲಾ ಪ್ರಯಾಣದ ದಾಖಲೆಗಳು ಸರಿಯಾಗಿವೆ ಎಂದು ಕಂಡುಬಂದ ನಂತರ ಆಕೆಯ ಭೇಟಿಗೆ ಅನುಮತಿ ನೀಡಲಾಗಿದೆ.

ಮಾಧ್ಯಮ ವರದಿಗಳ ನಂತರ ರಾಜಸ್ಥಾನ ಪೊಲೀಸರ ತಂಡವು ಅಂಜು ಅವರ ಬಗ್ಗೆ ವಿಚಾರಿಸಲು ಭಿವಾಡಿಯ ಮನೆಗೆ ತಲುಪಿದೆ. ಜೈಪುರಕ್ಕೆ ಹೋಗುವ ನೆಪದಲ್ಲಿ ಆಕೆ ಗುರುವಾರ ಮನೆಯಿಂದ ಹೊರ ಹೋಗಿದ್ದಳು. ಆದರೆ ಆಕೆ ಇದೀಗ ಪಾಕಿಸ್ತಾನದಲ್ಲಿದ್ದಾಳೆ ಎಂದು ಮನೆಯವರಿಗೆ ನಂತರ ಗೊತ್ತಾಗಿದೆ ಎಂದು ಆಕೆಯ ಪತಿ ಅರವಿಂದ್ ಪೊಲೀಸರಿಗೆ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಅವಳೊಂದಿಗೆ ವಾಟ್ಸಾಪ್‌ನಲ್ಲಿ ಮಾತನಾಡಿದಾಗ ಆಕೆ ಲಾಹೋರ್ ನಲ್ಲಿ ಇರುವುದಾಗಿ ತಿಳಿಯಿತು ಎಂದು ಅರವಿಂದ್ ಪೊಲೀಸರಿಗೆ ತಿಳಿಸಿದ್ದಾರೆ. ಅರವಿಂದ್ ಮತ್ತು ಅಂಜು 2007 ರಲ್ಲಿ ವಿವಾಹವಾಗಿದ್ದರು. ಇವರಿಗೆ 15 ವರ್ಷದ ಪುತ್ರಿ ಮತ್ತು ಆರು ವರ್ಷದ ಪುತ್ರನಿದ್ದಾನೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ