ಈಗ ಪ್ರಜಾಪ್ರಭುತ್ವದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ದಕ್ಷಿಣ ಕನ್ನಡ: ಕರ್ನಾಟಕ, ಗುಜರಾತ್, ಗೋವಾ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರ ಕಳ್ಳತನ ಆಗಿದೆ. ಇಡಿ, ಐಟಿ ಎಲ್ಲವೂ ಅವರ ಕೈಯಲ್ಲಿದೆ. ಹೀಗಾಗಿ ಕಳ್ಳತನ ಆಗ್ತಾ ಇದೆ. ಆದ್ದರಿಂದ ರಾಜ್ಯದಲ್ಲಿ ನಮಗೆ 150 ಸ್ಥಾನಗಳನ್ನು ಗೆಲ್ಲಬೇಕಿದೆ. ಒಂದೆರಡು ಕಳ್ಳತನ ಆದ್ರೂ ಸರ್ಕಾರ ಸುಭದ್ರವಾಗಿ ಉಳಿಯಲು ಇದು ಅನಿವಾರ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದ್ದಾರೆ.
ಅವರು ಮಂಗಳೂರು ನಗರದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ 40% ಕಮಿಷನ್ ನಿಂದ ವಿಫಲವಾಗಿದೆ ಎಂದರು.
ಬಿಜೆಪಿಯವರೇ ಎಲ್ಲಾ ಕಡೆ ಎಟಿಎಂ ಇಟ್ಟಿದ್ದಾರೆ. ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸ್ತಾ ಇದೆ, ಮನಿ ಮತ್ತು ಮಸಲ್ ಪವರ್ ಬಳಸ್ತಾ ಇದ್ದಾರೆ ಎಂದು ಆರೋಪಿಸಿದ ಖರ್ಗೆ, ದೇಶದಲ್ಲಿ ಶಿಕ್ಷಣ, ನಿರುದ್ಯೋಗ, ಹೂಡಿಕೆ, ಹಣದುಬ್ಬರ, ಭ್ರಷ್ಟಾಚಾರದ ಬಗ್ಗೆ ದೇಶದ ಪ್ರಧಾನಿ ಮಾತನಾಡುತ್ತಿಲ್ಲ ಎಂದರು.
ಬೆಂಗಳೂರಿನಿಂದ ವಾರಣಾಸಿಗೆ ಮೊನ್ನೆ ಒಂದು ರೈಲು ಬಿಟ್ಟು ಅದನ್ನು ದೊಡ್ಡ ಸುದ್ದಿ ಮಾಡಿದ್ದಾರೆ. ನಾನು ರೈಲ್ವೇ ಸಚಿವ ಆಗಿದ್ದಾಗ 30ಕ್ಕೂ ಅಧಿಕ ರೈಲು ಹಾಕಿದ್ದೆ ಎಂದು ತಿಳಿಸಿದರು.
ಇನ್ನು ಪಕ್ಷದಲ್ಲಿ ಟಿಕೆಟ್ ಸೇಲ್ ಬಗ್ಗೆ ಮಾಜಿ ಶಾಸಕ ಮೊಯ್ದಿನ್ ಬಾವಾ, ಮಾಡಿರುವ ಆರೋಪ ಕುರಿತಂತೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಟಿಕೆಟ್ ಸಿಗದೇ ಇದ್ದವರೂ ಈಗ ಆರೋಪ ಮಾಡ್ತಾರೆ ಅದಕ್ಕೆಲ್ಲಾ ಈಗ ಕಮೆಂಟ್ ಮಾಡುವುದಿಲ್ಲ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw