ಮಾನಸಿಕ ರೋಗಿಗಳ ಸಂಖ್ಯೆ ಏರಿಕೆಯಾಗುತಿದೆ: ಸಚಿವ ಡಾ.ಸುಧಾಕರ್ ಆಂತಕ - Mahanayaka

ಮಾನಸಿಕ ರೋಗಿಗಳ ಸಂಖ್ಯೆ ಏರಿಕೆಯಾಗುತಿದೆ: ಸಚಿವ ಡಾ.ಸುಧಾಕರ್ ಆಂತಕ

dr sudakar
09/12/2022

ಬೆಂಗಳೂರು: ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಹಾಗೂ ನರವಿಜ್ಞಾನ ಸಂಸ್ಥೆ ನೇತೃತ್ವದಲ್ಲಿ ನಡೆಯುತ್ತಿರುವ ಬ್ರೈನ್ ಹೆಲ್ತ್ ಇನಿಷೆಯೇಟಿವ್‌ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ಡಾ.ಸುಧಾಕರ್ ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ. ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ತಿಳಿಸಿದರು.

ಭಾರತ ಸರ್ಕಾರ ‘ಟಿ ಮನಸ್’ ಯೋಜನೆ ಮೂಲಕ ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಭಿಯಾನ ಮಾಡುತ್ತಿದೆ. ರಾಜ್ಯ ಸರ್ಕಾರ ಹಬ್ ಮತ್ತು ಸ್ಪೋಕ್ ಮಾಡೆಲ್‌ ಮೂಲಕ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾನ್ಸ್ ನೆರವಿನೊಂದಿಗೆ ಪೈಲಟ್‌ ಪ್ರಾಜೆಕ್ಟ್‌ ಮಾಡುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ಈ ಸೇವೆ ರಾಜ್ಯದ ಎಲ್ಲಾ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

ಕರ್ನಾಟಕದಲ್ಲಿ ಕಳೆದ 10 ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕದ ವಿಷಯವಾಗಿದೆ.ಇದನ್ನು ಹೋಗಲಾಡಿಸಲು ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ) ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಕೌನ್ಸಿಲಿಂಗ್ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ 3 ತಿಂಗಳ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಎನ್‌ಎಂ, ಸಿಎಚ್‌ಒಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೂ ಈ ಸಂಬಂಧ ತರಬೇತಿ ನೀಡಿ ಮಾನಸಿಕ ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಅನ್ನುವ ಬಗ್ಗೆ ತಿಳಿಸಲು ಯೋಜನೆ ಜಾರಿಗೊಳಿಸಲಿದ್ದೇವೆ ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ