ನಿಲ್ಲದ ಕ್ರೌರ್ಯ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಮಹಾರಾಷ್ಟ್ರದ ರತ್ನಗಿರಿಯಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ನಡೆದಿದೆ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಚಂಪಕ್ ಮೈದಾನದ ಬಳಿ ತೀವ್ರವಾಗಿ ಗಾಯಗೊಂಡಿದ್ದಳು.ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆ ಮೂಲಗಳ ಪ್ರಕಾರ, ಸಂತ್ರಸ್ತೆಗೆ ಅನೇಕ ಗಾಯಗಳಾಗಿದ್ದು, ಇದು ಕ್ರೂರ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರದ ಶಂಕೆಯನ್ನು ಹುಟ್ಟುಹಾಕಿದೆ.
ಈ ಘಟನೆಯು ರತ್ನಗಿರಿಯ ಶುಶ್ರೂಷಾ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನರ್ಸ್ ಗಳು ಮತ್ತು ಆಸ್ಪತ್ರೆ ಸಿಬ್ಬಂದಿಗಳು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿ, ಅಪರಾಧಕ್ಕೆ ಕಾರಣರಾದವರಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದರು.
ಇದನ್ನು ವಿರೋಧಿಸಿ ಆಸ್ಪತ್ರೆಯ ಸಿಬ್ಬಂದಿ, ಇತರ ಬೆಂಬಲಿಗರೊಂದಿಗೆ ಬೀದಿಗಿಳಿದು, ರತ್ನಗಿರಿಯ ಹಲವಾರು ಭಾಗಗಳಲ್ಲಿ ಸಂಚಾರವನ್ನು ನಿರ್ಬಂಧಿಸಿದ್ದರಿಂದ ಪ್ರತಿಭಟನೆಗಳು ತೀವ್ರಗೊಂಡವು. ಪ್ರತಿಭಟನಾಕಾರರು ಬ್ಯಾನರ್ ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ಅಪರಾಧಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕರೆ ನೀಡಿದರು. ಪರಿಸ್ಥಿತಿಯು ನಗರದಲ್ಲಿ ಬಿಗಾಡಾಯಿಸಿದೆ. ಅಧಿಕಾರಿಗಳು ಶಾಂತಿಗೆ ಒತ್ತಾಯಿಸುತ್ತಿದ್ದಾರೆ ಮತ್ತು ತನಿಖೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth