KPSC KAS ನೇಮಕಾತಿ: 319 ಗ್ರೂಪ್ ‘ಎ’ ಮತ್ತು ‘ಬಿ’ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರವು ಒಟ್ಟು 319 ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ (KAS) ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು KPSCಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರಗಳು (ಒಟ್ಟು 319 ಹುದ್ದೆಗಳು):
ಗ್ರೂಪ್ ‘ಎ’ ಹುದ್ದೆಗಳು (117):
ಅಸಿಸ್ಟೆಂಟ್ ಕಮಿಷನರ್ (ಡಿಪಿಎಆರ್) – 39, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು – 50, ಸಹಾಯಕ ನಿರ್ದೇಶಕರು (ಖಜಾನೆ ಇಲಾಖೆ) – 02, ಕಾರ್ಯನಿರ್ವಾಹಕ ಅಧಿಕಾರಿ (ಗ್ರೇಡ್-1) – 15, ಸಹಾಯಕ ನಿರ್ದೇಶಕರು (ಗ್ರೇಡ್-1) – 112.
ಗ್ರೂಪ್ ‘ಬಿ’ ಹುದ್ದೆಗಳು (202):
ತಹಶೀಲ್ದಾರ್ (ಗ್ರೇಡ್-2) – 25, ವಾಣಿಜ್ಯ ತೆರಿಗೆ ಅಧಿಕಾರಿ – 74, ಸಹಾಯಕ ನೋಂದಣಾಧಿಕಾರಿ – 06, ಕಾರ್ಮಿಕ ಅಧಿಕಾರಿ – 21, ಸಹಾಯಕ ನಿರ್ದೇಶಕರು (ಆಹಾರ ಮತ್ತು ನಾಗರಿಕ ಸರಬರಾಜು) – 12, ಉದ್ಯೋಗಾಧಿಕಾರಿ – 05, ಸಹಕಾರ ಅಭಿವೃದ್ಧಿ ಅಧಿಕಾರಿ – 03, ಮುನ್ಸಿಪಲ್ ಕಮಿಷನರ್ (ಗ್ರೇಡ್-1) – 20, ಸಹಾಯಕ ಸಾರಿಗೆ ಆಯುಕ್ತರು – 12, ಸಹಾಯಕ ನಿರ್ದೇಶಕರು (ಆಡಿಟ್) – 04, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ – 05.
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳೂ ಸಹ ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ. ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC, ST, Cat-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ ವಿವರ:
ಸಾಮಾನ್ಯ ಅರ್ಹತೆ (GM) ಅಭ್ಯರ್ಥಿಗಳಿಗೆ ₹600 ಶುಲ್ಕ ನಿಗದಿಪಡಿಸಲಾಗಿದೆ. ಪ್ರವರ್ಗ 2(A), 2(B), 3(A), 3(B) ಅಭ್ಯರ್ಥಿಗಳಿಗೆ ₹300 ಹಾಗೂ ಮಾಜಿ ಸೈನಿಕರಿಗೆ ₹50 ಶುಲ್ಕವಿರುತ್ತದೆ. SC, ST, Cat-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಒಟ್ಟು 3 ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಮೊದಲಿಗೆ ಪೂರ್ವಭಾವಿ ಪರೀಕ್ಷೆ (MCQ), ನಂತರ ಮುಖ್ಯ ಪರೀಕ್ಷೆ (ವಿವರಣಾತ್ಮಕ ಲಿಖಿತ ಪರೀಕ್ಷೆ) ಹಾಗೂ ಕೊನೆಯದಾಗಿ ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ) ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ 1 ಆಗಸ್ಟ್ 2026 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31 ಆಗಸ್ಟ್ 2026 ಕೊನೆಯ ದಿನವಾಗಿದೆ. ಪೂರ್ವಭಾವಿ ಪರೀಕ್ಷೆಯನ್ನು 15 ನವೆಂಬರ್ 2026 ರಂದು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
KPSC ಅಧಿಕೃತ ವೆಬ್ಸೈಟ್ kpsconline.karnataka.gov.in ಗೆ ಭೇಟಿ ನೀಡಿ, OTR (One Time Registration) ಪೂರ್ಣಗೊಳಿಸಿ. ಪ್ರೊಫೈಲ್ನಲ್ಲಿ ಫೋಟೋ ಹಾಗೂ ಸಹಿ ಅಪ್ಲೋಡ್ ಮಾಡಿದ ನಂತರ ‘Apply to Post’ ವಿಭಾಗಕ್ಕೆ ತೆರಳಿ ಅರ್ಜಿ ಭರ್ತಿ ಮಾಡಿ ಆನ್ಲೈನ್ ಮೂಲಕ ಶುಲ್ಕ ಪಾವತಿಸಬೇಕಾಗುತ್ತದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/H1duNIQRfXnJcfQKWPzNqD























