11:08 PM Tuesday 14 - October 2025

“ಓ ಲಾರ್ಡ್ ಜೀಸಸ್, ಪ್ಲೀಸ್ ಹೆಲ್ಪ್ ಮೀ” ಎಂದು ಎನ್.ಮಹೇಶ್ ಬೇಡುತ್ತಿರುವ ವಿಡಿಯೋ ವೈರಲ್

n mahesh
02/08/2021

ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲು ವೇದಿಕೆ ಸಜ್ಜಾಗಿದೆ. ಆಗಸ್ಟ್ 5ರಂದು ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಮಧ್ಯೆಯೇ ಎನ್.ಮಹೇಶ್ ವಿರೋಧಿಗಳು ಅವರ ಹಳೆಯ ವಿಡಿಯೋವೊಂದನ್ನು ವೈರಲ್ ಮಾಡಿದ್ದಾರೆ.

2018ರ ವಿಧಾನಸಭಾ ಚುನಾವಣೆ ಸಂದರ್ಭದ ವಿಡಿಯೋ ಇದಾಗಿದೆ ಎಂದು ಹೇಳಲಾಗಿದೆ. ಚುನಾವಣೆ ಸಂದರ್ಭದಲ್ಲಿ ಎನ್.ಮಹೇಶ್ ಅವರು ಚರ್ಚ್ ಗೆ ತೆರಳಿ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿದ್ದರು. ಆದರೆ ಈ ಪ್ರಾರ್ಥನೆಯನ್ನು ಇದೀಗ ವ್ಯಂಗ್ಯ ಮಾಡಲಾಗುತ್ತಿದ್ದು, ಹೈಡ್ರಾಮಾ ಎಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದೆ.

“ಓ ಲಾರ್ಡ್ ಜೀಸಸ್, ಪ್ಲೀಸ್ ಹೆಲ್ಪ್ ಮೀ” ಎಂದು ಎನ್.ಮಹೇಶ್ ಅವರು ಜೀಸಸ್ ನ್ನು ಪ್ರಾರ್ಥಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಎನ್.ಮಹೇಶ್ ಅವರನ್ನು ಟೀಕಿಸುವ ಭರದಲ್ಲಿ ಚರ್ಚ್ ನ ಪ್ರಾರ್ಥನೆಯನ್ನು ವ್ಯಂಗ್ಯ ಮಾಡುತ್ತಿರುವುದು ವಿಷಾಧ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳು…

ಎನ್.ಮಹೇಶ್ ಬಿಜೆಪಿ ಸೇರ್ಪಡೆಗೆ ಡೇಟ್ ಫಿಕ್ಸ್: ಬೆಂಗಳೂರಿನ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೆ ಎನ್.ಮಹೇಶ್ ಸಿದ್ಧತೆ

“ಕಸವು ಕಸದ ಬುಟ್ಟಿಗೆ ಸೇರಿತು” | ಎನ್.ಮಹೇಶ್ ಬಿಜೆಪಿ ಸೇರ್ಪಡೆ ಹಿನ್ನೆಲೆ ಪರ-ವಿರೋಧ ಚರ್ಚೆ!

ದಲಿತರನ್ನು ಅಧಿಕಾರದಿಂದ ವಂಚಿಸುವ ಪ್ರಕ್ರಿಯೆ ರಾಜ್ಯದಲ್ಲಿ ಆರಂಭವಾಗಿದೆ | ಎನ್.ಮಹೇಶ್ ಆಕ್ರೋಶ

ಬಿಜೆಪಿಯಲ್ಲಿ ದಲಿತ ಸಿಎಂ ಬಗ್ಗೆ ಧ್ವನಿಯೆತ್ತಿ ಎನ್.ಮಹೇಶ್ ತಾಕತ್ತು ಪ್ರದರ್ಶಿಸಲಿ | ಮಾಜಿ ಶಾಸಕ ಬಾಲರಾಜ್ ಕಿಡಿ

ಪಕ್ಷ ಸಂಘಟನೆಗೆ ಅಧಿಕಾರವೇ ಬೇಕು ಎಂದೇನಿಲ್ಲ: ಈಶ್ವರಪ್ಪ ನೀಡಿದ ಸುಳಿವೇನು?

ಇತ್ತೀಚಿನ ಸುದ್ದಿ

Exit mobile version