3:53 AM Saturday 18 - October 2025

ಕರ್ನಾಟಕ ಉಚ್ಛ ನ್ಯಾಯಾಲಯ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

banglore
22/09/2023

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಅನಂತ ರಾಮನಾಥ ಹೆಗಡೆ, ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಹಾಗೂ ಗೌರವಾನ್ವಿತ ನ್ಯಾಯಮೂರ್ತಿ ಸಿದ್ದಯ್ಯ ರಾಚಯ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.

ರಾಜಭವನದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.

ಸಮಾರಂಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವರಾಳೆ ಸೇರಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಮಾರಂಭದ ಸ್ವಾಗತವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮಾ ಅವರು ನೆರವೇರಿಸಿದರು.

ಇತ್ತೀಚಿನ ಸುದ್ದಿ

Exit mobile version