12:59 AM Saturday 23 - August 2025

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಎಫ್ ಐಆರ್ ದಾಖಲು

aragajan
04/08/2023

ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಾಜಿ ಗೃಹ ಸಚಿವ, ಬಿಜೆಪಿಯ ಹಿರಿಯ ನಾಯಕ ಆರಗ ಜ್ಞಾನೇಂದ್ರ ವಿರುದ್ಧ ಗುರುವಾರ ಪೊಲೀಸ್ ಎಫ್ ಐಆರ್ ದಾಖಲಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ರಾಜೀವ್ ಜೇನ್ ಅವರು ನೀಡಿರುವ ದೂರಿನನ್ವಯ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಐಪಿಸಿ ಸೆಕ್ಷನ್ 504 (ಶಾಂತಿ ಭಂಗ ಉದ್ದೇಶದಿಂದ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣವನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ವರ್ಗಾಯಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 1ರಂದು ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕ ಆರಗ ಅವರು ಖರ್ಗೆ ಅವರ ಮೈಬಣ್ಣ ಮತ್ತು ಅವರು ಬಂದ ಪ್ರದೇಶದ ಜನರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version