4:42 AM Saturday 18 - October 2025

ಅಶ್ಲೀಲ ವಿಡಿಯೋ ಪ್ರಕರಣ: ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ

prajwal revanna
01/05/2024

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಘಟನೆಯ ಬಳಿಕ ಮೊದಲ ಬಾರಿಗೆ ಪ್ರಜ್ವಲ್ ಪ್ರತಿಕ್ರಿಯೆ ನೀಡಿದ್ದು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ CID ಬೆಂಗಳೂರಿಗೆ ಮನವಿ ಮಾಡಿದ್ದೇನೆ.  ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು  ‘ಎಕ್ಸ್’ ಖಾತೆಯಲ್ಲಿ ಪ್ರಜ್ವಲ್ ರೇವಣ್ಣ ಪೋಸ್ಟ್ ಮಾಡಿದ್ದಾರೆ.

ವಿಶೇಷ ತನಿಖಾ ತಂಡಕ್ಕೆ ವಕೀಲ ಅರುಣ್​.ಜೆ ಮೂಲಕ ಪ್ರಜ್ವಲ್ ರೇವಣ್ಣ ಪತ್ರ ಬರೆದಿದ್ದು, ಕಲಂ 41 (ಎ) ಸಿಆರ್ ​ಪಿಸಿ ಅಡಿಯಲ್ಲಿ ನೀಡಿರುವ ನೋಟಿಸ್​​ ಗೆ ಖುದ್ದಾಗಿ ಹಾಜರಾಗಲು ಕಾಲಾವಕಾಶ ಕೇಳಿದ್ದಾರೆ.

ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ,  ಮನೆಯ ಮೇಲೆ ತಮ್ಮ ಕಚೇರಿಯಿಂದ ಕಳುಹಿಸಿರುವ ನೋಟಿಸ್ ಅಂಟಿಸಲಾಗಿದೆ. ಏಪ್ರಿಲ್ 30ರಂದು ನೀಡಿರುವ ನೋಟಿಸ್ ​ನಲ್ಲಿ ಮೇ 1 ರಂದು ವಿಚಾರಣೆಗೆ ಹಾಜರಾಗಲು ತಿಳಿಸಲಾಗಿದೆ. ಆದ್ರೆ ಪ್ರಜ್ವಲ್ ರೇವಣ್ಣ ಬೆಂಗಳೂರಿನಿಂದ ಹೊರಗಡೆ ವಿದೇಶ ಪ್ರವಾಸದಲ್ಲಿದ್ದಾರೆ.

ನೋಟಿಸ್ ಬಗ್ಗೆ ವಿಷಯ ತಿಳಿಸಿದ್ದು, ಕಕ್ಷಿದಾರ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು ಏಳು ದಿನದ ಕಾಲಾವಕಾಶ ಅಗತ್ಯವಿದೆ. ನನ್ನ ಕಕ್ಷಿದಾರರಿಗೆ ಸುಮಾರು ಏಳು ದಿನಗಳ ಕಾಲಾವಕಾಶ ನೀಡಿ ಮತ್ತೊಂದು ದಿನಾಂಕ ನೀಡಬೇಕು ಎಂದು ಪ್ರಜ್ವಲ್​ ರೇವಣ್ಣ ಪರ ವಕೀಲ ಅರುಣ್ ಜೆ. ಪತ್ರದ ಮೂಲಕ ಎಸ್​ಐಟಿಗೆ ಮನವಿ ಮಾಡಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version