ಆಟವಾಡಲು ಮನೆಗೆ ಬಂದಿದ್ದ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ವ್ಯಕ್ತಿಯ ಬಂಧನ - Mahanayaka
10:16 PM Saturday 25 - October 2025

ಆಟವಾಡಲು ಮನೆಗೆ ಬಂದಿದ್ದ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ವ್ಯಕ್ತಿಯ ಬಂಧನ

03/07/2024

ಒಡಿಶಾದ ಭುವನೇಶ್ವರದಲ್ಲಿ ಮನೆಯೊಂದಕ್ಕೆ ಆಟವಾಡಲು ಹೋಗಿದ್ದ ಮೂರು ವರ್ಷದ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ನಂತರ ತಲೆಮರೆಸಿಕೊಂಡಿದ್ದ 23 ವರ್ಷದ ಆರೋಪಿ ಸಂತೋಷ್ ಖುಂಟಿಯಾನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಮಗು ಆಟವಾಡಲು ಮನೆಗೆ ಬಂದಾಗ ಖುಂಟಿಯಾ ಅವರ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಮದ್ಯದ ಅಮಲಿನಲ್ಲಿದ್ದ ಸಂತೋಷ್ ಖುಂಟಿಯಾ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಬಾಲಕಿ ಮನೆಗೆ ಹಿಂದಿರುಗದಿದ್ದಾಗ ಆಕೆಯ ಕುಟುಂಬವು ಹುಡುಕಾಟವನ್ನು ಪ್ರಾರಂಭಿಸಿದ ನಂತರ ಬಾಲಕಿಯನ್ನು ರಕ್ಷಿಸಲಾಗಿದೆ ಎಂದು ಭುವನೇಶ್ವರ ಡಿಸಿಪಿ ಪ್ರತೀಕ್ ಸಿಂಗ್ ತಿಳಿಸಿದ್ದಾರೆ.

ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದು ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತು. ಇದೀಗ ಅವಳ ದೈಹಿಕ ಸ್ಥಿತಿ ಸ್ಥಿರವಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ