ಕೋಮು ಭಾವನೆ ಕೆರಳಿಸುವ ಪೋಸ್ಟ್: ತುಮಕೂರಿನ ಮಹಿಳೆಯ ಮೇಲೆ ಕಣ್ಣಿಟ್ಟ ಒಡಿಶಾ ಪೊಲೀಸರು - Mahanayaka
1:26 AM Thursday 30 - November 2023

ಕೋಮು ಭಾವನೆ ಕೆರಳಿಸುವ ಪೋಸ್ಟ್: ತುಮಕೂರಿನ ಮಹಿಳೆಯ ಮೇಲೆ ಕಣ್ಣಿಟ್ಟ ಒಡಿಶಾ ಪೊಲೀಸರು

odisha accident case
04/06/2023

ಒಡಿಶಾ: ಬಾಲಸೋರ್‌ ನಲ್ಲಿ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ತುಮಕೂರಿನ ಮಹಿಳೆಯ ಹಿಂದೆ ಒಡಿಶಾ ಪೊಲೀಸರು ಬಿದ್ದಿದ್ದು, ಕಾನೂನು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

ತುಮಕೂರು ಮೂಲದ ಮಹಿಳೆ ಎನ್ನಲಾಗಿರುವ ಶಕುಂತಲಾ ಎಸ್. ಎಂಬವರು ರೈಲು ದುರಂತ ನಡೆದ ಫೋಟೋವನ್ನು ಬಳಸಿ, ಮಸೀದಿಯೊಂದರ ಪಕ್ಕದಲ್ಲೇ ಅಪಘಾತ ಸಂಭವಿಸಿದೆ ಎಂದು ಮಾರ್ಕ್ ಮಾಡಿರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದ್ದು, ಕರ್ನಾಟಕದಲ್ಲೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಬಗ್ಗೆ ಟ್ವೀಟ್ ಮಾಡಿರುವ ಒಡಿಶಾ ಪೊಲೀಸರು, ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿ ತನದಿಂದ ಕೋಮುಬಣ್ಣ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದು ಅತ್ಯಂತ ದುರಾದೃಷ್ಟಕರ ಎಂದಿದ್ದಾರೆ.

ಈ ಅಪಘಾತಕ್ಕೆ ಕಾರಣ ಏನು ಎನ್ನುವುದರ ಬಗ್ಗೆ ಜಿಆರ್ ಪಿ ಯಿಂದ ತನಿಖೆ ನಡೆಯುತ್ತಿದೆ. ಇಂತಹ ಸುಳ್ಳು ಮತ್ತು ದುರುದ್ದೇಶ ಪೂರಿತ ಪೋಸ್ಟ್ ಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ನಾವು ಮನವಿ ಮಾಡುತ್ತೇವೆ. ವದಂತಿಗಳನ್ನು ಹಬ್ಬಿಸಿ ಕೋಮುಸೌಹಾರ್ದತೆ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ