ಹಾಸ್ಟೆಲ್ ನಲ್ಲಿ ಮಲಗಿದ್ದ 8 ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಿದ ಕಿಡಿಗೇಡಿಗಳು!

ಒಡಿಶಾ: ಹಾಸ್ಟೆಲ್ ನಲ್ಲಿ ಮಲಗಿದ್ದ 8 ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಿರುವ ವಿಲಕ್ಷಣ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ.
ಫಿರಿಂಗಿಯಾ ಬ್ಲಾಕ್‌ನ ಸಲಗುಡದಲ್ಲಿರುವ ಸೇವಾಶ್ರಮ್ ಶಾಲೆಯ ಹಾಸ್ಟೆಲ್ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಬೆಳಗಾಗುವ ಹೊತ್ತಿಗೆ ವಿದ್ಯಾರ್ಥಿಗಳಿಗೆ ಕಣ್ಣು ತೆರೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮೊದಲು ಅವರನ್ನು ಗೋಚಪದ ಆಸ್ಪತ್ರೆಗೆ ದಾಖಲು ಮಾಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಫುಲ್ಬಾನಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಯ್ತು.
ಅಂಟು ಕಣ್ಣಿಗೆ ಹಾನಿ ಮಾಡಿದೆ. ಆದರೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದ್ದರಿಂದಾಗಿ ಭಾರೀ ಅಪಾಯವನ್ನು ತಪ್ಪಿಸಲಾಗಿದೆ ಅಂತ ವೈದ್ಯರು ಹೇಳಿದ್ದಾರೆ. 8 ವಿದ್ಯಾರ್ಥಿಗಳ ಪೈಕಿ ಒಬ್ಬ ವಿದ್ಯಾರ್ಥಿಯನ್ನು ಚಿಕಿತ್ಸೆಯ ನಂತರ ಬಿಡುಗಡೆಗೊಳಿಸಲಾಗಿದೆ. 7 ಮಂದಿಯನ್ನು ನಿಗಾದಲ್ಲಿಡಲಾಗಿದೆ.
ವಿದ್ಯಾರ್ಥಿಗಳ ಕಣ್ಣಿಗೆ ಈ ರೀತಿಯಾಗಿ ಹಾನಿ ಮಾಡಿದ್ದೇಕೆ? ಅಂಟು ಕ್ಯಾಂಪಸ್ ನೊಳಗೆ ವಿದ್ಯಾರ್ಥಿಗಳ ಕೈಗೆ ಸಿಕ್ಕಿದ್ಹೇಗೆ, ವಿದ್ಯಾರ್ಥಿಗಳ ಕಣ್ಣಿಗೆ ಹಾಕಿದವರು ಯಾರು ಎಂಬೆಲ್ಲ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ಆರಂಭವಾಗಿದೆ.
ಘಟನೆಯ ನಂತರ ತಕ್ಷಣವೇ ಶಾಲಾ ಮುಖ್ಯೋಪಾಧ್ಯಾಯ ಮನೋರಂಜನ್ ಸಾಹು ಅವರನ್ನು ಅಮಾನತು ಮಾಡಿದೆ. ಸದ್ಯ ವಿವರವಾದ ತನಿಖೆಗೆ ಆದೇಶ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD