9:52 PM Saturday 31 - January 2026

ಪ್ರಧಾನಿ ಮೋದಿ ಮೊದಲು ರೈಲ್ವೇ ಸಚಿವರಿಗೆ ಶಿಕ್ಷೆ ನೀಡಲಿ: ಕಾಂಗ್ರೆಸ್ ಮುಖಂಡರ ಸವಾಲು

04/06/2023

ಒಡಿಶಾದ ಬಾಲಸೋರ್‌ನಲ್ಲಿ ನಡೆದ ಭೀಕರ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು ದಿಲ್ಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸವಾಲ್ ಎಸೆದಿದ್ದಾರೆ‌.

ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಶಕ್ತಿಸಿನ್ಹ್ ಗೋಹಿಲ್ ಹಾಗೂ ವಕ್ತಾರ ಪವನ್ ಖೇರ, ದುರಂತಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು. ಹೀಗಾಗಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಗೆ ಮೊದಲು ಶಿಕ್ಷೆ ಪ್ರಕ್ರಿಯೆ ಆರಂಭಿಸಲಿ ಎಂದು ಪ್ರತಿಪಕ್ಷ ಕಾಂಗ್ರೆಸ್ ಸವಾಲೆಸೆದಿದೆ.

275 ಜನರನ್ನು ಬಲಿತೆಗೆದುಕೊಂಡ ಹಾಗೂ 1,000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಮೂರು ರೈಲು ಅಪಘಾತದ ನೈತಿಕ ಹೊಣೆಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಇಂದು ಆಗ್ರಹಿಸಿದೆ.

ಒಡಿಶಾ ರೈಲು ಅಪಘಾತವು, ‘ಸಂಪೂರ್ಣ ನಿರ್ಲಕ್ಷ್ಯ, ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳು, ಅಸಮರ್ಥತೆ ಹಾಗೂ ಮೋದಿ ಸರಕಾರದ ಧೋರಣೆಯಿಂದ ಉಂಟಾದ ಮಾನವ ನಿರ್ಮಿತ ವಿನಾಶವಾಗಿದೆ’ ಎಂದು ಅವರಿಬ್ಬರು ಆರೋಪಿಸಿದರು.

‘ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ’ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ವೈಷ್ಣವ್ ರಿಂದ ಶಿಕ್ಷೆ ಆರಂಭಿಸಬೇಕು. ನಾವು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ರಾಜೀನಾಮೆಗೆ ಒತ್ತಾಯಿಸುತ್ತೇವೆ’ ಎಂದು ಕಾಂಗ್ರೆಸ್ ನಾಯಕರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version