ಕುಮಾರಸ್ವಾಮಿಯ ಜನತಾ ದರ್ಶನ ಕಾರ್ಯಕ್ರಮಕ್ಕೆ ಅಧಿಕಾರಿಗಳು ಗೈರು: ಸರ್ಕಾರದ ವಿರುದ್ಧ ಹೆಚ್ ಡಿಕೆ ಕಿಡಿ

hd kumaraswamy
05/07/2024

ಮಂಡ್ಯ: ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮಂಡ್ಯದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲರೂ ಗೈರು ಹಾಜರಾಗಿರುವ ಘಟನೆ ನಡೆದಿದ್ದು, ಇದರಿಂದ ಕುಮಾರಸ್ವಾಮಿ ಗರಂ ಆಗಿದ್ದಾರೆ.

ಇನ್ನೂ ಕುಮಾರಸ್ವಾಮಿ ಅವರ ಜನತಾ ದರ್ಶನ ಕಾರ್ಯಕ್ರಮಕ್ಕೆ ಅಧಿಕಾರಿಗಳು ಗೈರು ಹಾಜರಾಗಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಮೌಖಿಕ ಆದೇಶ ಕಾರಣ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.

ಇನ್ನೂ ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಕುಮಾರಸ್ವಾಮಿ ಅವರು ನಡೆಸುತ್ತಿರುವ ಜನತಾ ದರ್ಶನ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರ ಸಚಿವರು ಜನತಾ ದರ್ಶನ ನಡೆಸಲು ಸರ್ಕಾರದಲ್ಲಿ ಅವಕಾಶವಿಲ್ಲ ಎನ್ನುವ ತೀರ್ಮಾನ ಕೈಗೊಂಡು ಸಿಎಂ ಮೂಲಕ ಮುಖ್ಯಕಾರ್ಯದರ್ಶಿಗಳು ಮಂಡ್ಯ ಜಿಲ್ಲೆಯ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಮೌಖಿಕವಾಗಿ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಕುಮಾರಸ್ವಾಮಿ ಕಿಡಿ:

ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ. ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ. ಜನತಾ ದರ್ಶನದ ಬಗ್ಗೆನೇ ಸಚಿವ ಸಂಪುಟದ ಸಭೆ ಕರೆದು ಚರ್ಚೆ ಮಾಡಿದ್ದಾರೆ. ನೀವು ಅಧಿಕಾರಿಗಳನ್ನು ದೂರ ಇಡಬಹುದು. ಆದರೆ ನನ್ನಿಂದ ಜನರನ್ನ ದೂರ ಮಾಡಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಅಧಿಕಾರಿಗಳು ಕಾರ್ಯಕ್ರಮಕ್ಕೆ ಬರದೇ ರೀತಿಯಲ್ಲಿ ಸುತ್ತೋಲೆ ಹೊರಡಿಸಿದ್ದಾರೆ. ಅಧಿಕಾರಿಗಳ ವಿರುದ್ಧ ದೂಷಿಸುವುದಿಲ್ಲ, ಇದು ಸರ್ಕಾರ ಸಣ್ಣತನವನ್ನ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು ಇದು ಕುಮಾರಸ್ವಾಮಿಯ ಮನೆಯ ಕಾರ್ಯಕ್ರಮವಲ್ಲ ಎಂದು ಗರಂ ಆಗಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ

Exit mobile version