ಜಾತ್ಯತೀತ  ಶಕ್ತಿಗೆ ಗೆಲುವು ತಂದುಕೊಡಲು ಒಗ್ಗೂಡಿ ಕೆಲಸ ಮಾಡಬೇಕು: ಧ್ರುವ ನಾರಾಯಣ

udupi congress
05/08/2022

ಉಡುಪಿ: ದೇಶದ 75ನೇ ಸ್ವಾತಂತ್ರೋತ್ಸವದ ಅಮೃತಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಪು ಉತ್ತರ ಹಾಗೂ ದಕ್ಷಿಣ ವಲಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಮಟ್ಟುವಿನಿಂದ ಶಿರ್ವದವರೆಗೆ ಪಾದಯಾತ್ರೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಪಾದಯಾತ್ರೆಗೆ ಎಐಸಿಸಿ ಕಾರ್ಯದರ್ಶಿ ಜಯಕುಮಾರ್ ಮಯೂರು ಮಟ್ಟುವಿನಲ್ಲಿ ಚಾಲನೆ ನೀಡಿದರು. ಬಳಿಕ ಅಲ್ಲಿಂದ ಹೊರಟ ಪಾದಯಾತ್ರೆಯು ಕಟಪಾಡಿ, ಕುರ್ಕಾಲು, ಶಂಕರಪುರ, ಬಂಟಕಲ್ಲು ಮಾರ್ಗವಾಗಿ ಶಿರ್ವದವರೆಗೆ ಒಟ್ಟು 15 ಕಿ.ಮೀ. ದೂರ ಕ್ರಮಿಸಿ ಸಮಾಪ್ತಿ ಹೊಂದಿತು. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮಳೆಯನ್ನು ಲೆಕ್ಕಿಸದೆ ಪಾದಯಾತ್ರೆಯಲ್ಲಿ ಪಾಲ್ಗೊಂಡರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಮಾತನಾಡಿ, ಸ್ವಾತಂತ್ರ ಪೂರ್ವ ಮತ್ತು ಸ್ವಾತಂತ್ರ ನಂತರ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಜನರಿಗೆ ಈ ಪಾದಯಾತ್ರೆ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ಈ ಪಾದಯಾತ್ರೆ ಮೂಲಕ ಕೋಮುವಾದಿ ಶಕ್ತಿಗಳನ್ನು ಸೋಲಿಸಿ, ಜಾತ್ಯತೀತಯ ಶಕ್ತಿಗೆ ಗೆಲುವು ತಂದುಕೊಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಪಾದಯಾತ್ರೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಅಭಯಚಂದ್ರ ಜೈನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಎಂ.ಎ.ಗಫೂರು, ವರೋನಿಕಾ ಕರ್ನೆಲಿಯೋ, ನವೀನ್‌ಚಂದ್ರ ಶೆಟ್ಟಿ, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ನವೀನ್ ಚಂದ್ರ ಸುವರ್ಣ, ಶಬ್ಬೀರ್ ಉಡುಪಿ, ಸರಸು ಡಿ.ಬಂಗೇರ, ಶ್ರೀನಿವಾಸ್, ರಿಯಾಝ್ ಪಳ್ಳಿ ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version